ನಟಿ ಸಂಜನಾ ಗಲ್ರಾನಿ (Sanjjana Galrani) ಅ.10ರಂದು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ತಮ್ಮ ಮೇಲಿದ್ದ ಎಲ್ಲಾ ಸುಳ್ಳು ಕೇಸ್‌ಗಳಿಂದ ದೋಷಮುಕ್ತರಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಹುಟ್ಟುಹಬ್ಬವನ್ನು ಕುಟುಂಬಸ್ಥರು ಹಾಗೂ ಆತ್ಮೀಯರೊಂದಿಗೆ ಸಂಜನಾ ವಿಜೃಂಭಣೆಯಿಂದ ಆಚರಿಸಿದ್ದಾರೆ. ನಟಿಯ ಬರ್ತ್‌ಡೇ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ಸ್ ಭಾಗಿಯಾಗಿ ಹಾರೈಸಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಸಂಜನಾ ಗಲ್ರಾನಿ ಹುಟ್ಟುಹಬ್ಬದ ಕಾರ್ಯಕ್ರಮ ಆಯೋಜಿಸಿದ್ದು, ಬಹುಭಾಷಾ ನಟಿ ನಿಕ್ಕಿ ಗಲ್ರಾನಿ, ‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ, ನಟ ಅನಿರುದ್ಧ್, ನಿರ್ಮಾಪಕ ಭಾಮ ಗಿರೀಶ್, ನಿರ್ಮಾಪಕ ಆರ್. ಚಂದ್ರು, ಲೇಖಕ ಕವಿರಾಜ್ ಸೇರಿದಂತೆ ಅನೇಕ ಗಣ್ಯರು ಈ ಸಂಭ್ರಮಕ್ಕೆ ಸಾಕ್ಷಿಯಾದರು.
ಅಂದಹಾಗೆ, ವೈಯಕ್ತಿಕ ಬದುಕಿನಲ್ಲಿ ಮಗನ ಪಾಲನೆಯಲ್ಲಿ ಬ್ಯುಸಿಯಾಗಿದ್ದ ನಟಿ ಮತ್ತೆ ನಟನೆಗೆ ಕಮ್ ಬ್ಯಾಕ್ ಆಗಿದ್ದಾರೆ. ಮಾಲಿವುಡ್‌ನಲ್ಲಿ ಹೊಸ ಚಿತ್ರವನ್ನು ಅವರು ಒಪ್ಪಿಕೊಂಡಿದ್ದಾರೆ. ಸದ್ಯದಲ್ಲೇ ಮುಂಬರುವ ಚಿತ್ರಗಳ ಬಗ್ಗೆ ಅವರು ಮಾಹಿತಿ ನೀಡಲಿದ್ದಾರೆ. ಇದನ್ನೂ ಓದಿ:ಮಗುವಿನ ಮುಖ ರಿವೀಲ್ ಮಾಡಿದ ‘ಲಕ್ಷ್ಮಿ ಬಾರಮ್ಮ’ ನಟಿ ಕವಿತಾ