ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ (Sanjjanaa Galrani) ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಹೆಣ್ಣು ಮಗುವನ್ನು ನಟಿ ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಐಪಿಎಲ್ ಕುರಿತಾದ ಕ್ರೀಡಾ ಪ್ರಧಾನ ಚಿತ್ರದಲ್ಲಿ ಉಪ್ಪಿ-‘ಕರ್ವ’ ಡೈರೆಕ್ಟರ್ ಆ್ಯಕ್ಷನ್ ಕಟ್
ನಟಿ ಸಂಜನಾ ಗಲ್ರಾನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಇದನ್ನೂ ಓದಿ:ಗೃಹಪ್ರವೇಶದ ಸಂಭ್ರಮದಲ್ಲಿ ‘ಪುಷ್ಪ-2’ ನಟಿ ಅನಸೂಯ
ಇತ್ತೀಚೆಗೆ ವಿಶೇಷವಾಗಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ ತಾವು ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರವನ್ನು ಹಂಚಿಕೊಂಡಿದ್ದರು.
View this post on Instagram
ಲಾಕ್‌ಡೌನ್ ಸಮಯದಲ್ಲಿ ಡಾ. ಅಜೀಜ್ ಪಾಷಾ ಅವರನ್ನ ಪ್ರೀತಿಸಿ ವಿವಾಹವಾಗಿದ್ದರು. 2022ರ ಮೇ ತಿಂಗಳಲ್ಲಿ ಸಂಜನಾ ಗಲ್ರಾನಿ ತಮ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಅಜೀಜ್ ಪಾಷಾ ಮತ್ತು ಸಂಜನಾ ದಂಪತಿಗೆ ‘ಅಲಾರಿಕ್’ ಹೆಸರಿನ ಮಗನಿದ್ದಾನೆ.
2006ರಲ್ಲಿ ‘ಗಂಡ ಹೆಂಡತಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಸಂಜನಾ ಎಂಟ್ರಿ ಕೊಟ್ಟರು. ಜಾಕ್ ಪಾಟ್, ಆಟೋಗ್ರಾಫ್ ಪ್ಲೀಸ್, ಸತ್ಯಮೇವ ಜಯತೇ, ಮಸ್ತ್ ಮಜಾ ಮಾಡಿ, ಹುಡುಗ ಹುಡುಗಿ, ಮೈಲಾರಿ ಮತ್ತು ನರಸಿಂಹ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.