ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾನಿ ಅವರ ಸಹೋದರಿ ನಿಕ್ಕಿ ಗಲ್ರಾನಿ ನಟ ಆದಿ ಪಿನಿಸೆಟ್ಟಿ ಅವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು ತಾವು ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿರುವ ಕುರಿತು ಹೇಳಿಕೊಂಡಿದ್ದಾರೆ. ಅಭಿಮಾನಿಗಳು, ಸಿನಿಮಾ ಕಲಾವಿದರು ಕಾಮೆಂಟ್ ಮಾಡುವ ಮೂಲಕವಾಗಿ ಶುಭ ಕೋರುತ್ತಿದ್ದಾರೆ.
ಜೀವನದಲ್ಲಿ ಹಿಡಿದಿಟ್ಟುಕೊಳ್ಳುವ ಅತ್ಯುತ್ತಮ ವಿಷಯವೆಂದರೆ ಪರಸ್ಪರ. ನಾವು ಒಂದೆರಡು ವರ್ಷಗಳ ಹಿಂದೆ ಒಬ್ಬರನ್ನೊಬ್ಬರು ಕಂಡುಕೊಂಡಿದ್ದೇವೆ ಮತ್ತು ಅದು ಈಗ ಅಧಿಕೃತವಾಗಿದೆ. 2022 ಮಾರ್ಚ್ 24 ಈ ದಿನ ನಮಗೆ ನಿಜಕ್ಕೂ ವಿಶೇಷವಾಗಿತ್ತು. ನಮ್ಮಿಬ್ಬರ ಮನೆಯವರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡೆವು. ನಾವು ಈ ಹೊಸ ಪ್ರಯಾಣವನ್ನು ಒಟ್ಟಿಗೆ ಆರಂಭಿಸುತ್ತಿದ್ದೇವೆ. ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದ ನಮ್ಮ ಜೊತೆಗೆ ಇರಲಿ ಎಂದು ಬರೆದುಕೊಂಡು ನಿಶ್ಚಿತಾರ್ಥ ಕೆಲವು ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ
View this post on Instagram
ಖ್ಯಾತ ನಟ ಆದಿ ಪಿನಿಸೆಟ್ಟಿ ಜೊತೆಗೆ ಹೊಸ ಬಾಳು ಆರಂಭಿಸಲು ನಿಕ್ಕಿ ಸಿದ್ಧರಾಗಿದ್ದಾರೆ. ನಿಕ್ಕಿ ಮತ್ತು ಆದಿ ಈ ಮೊದಲಿನಂದಲೂ ಡೇಟಿಂಗ್ ಮಾಡುತ್ತಿದ್ದರು. ಆದರೆ ಈ ವಿಚಾರವನ್ನು ಒಪ್ಪಿಕೊಂಡಿರಲಿಲ್ಲ. ಈಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅವರು ತಮ್ಮ ಪ್ರೀತಿ ವಿಚಾರವನ್ನು ಬಹಿರಂಗ ಮಾಡಿದ್ದಾರೆ.
ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ಕನ್ನಡ, ತಮಿಳು, ಮಲಯಾಳಂ ಭಾಷೆಯ ಸಿನಿಮಾ ಸೇರಿ 30ಕ್ಕೂ ಅಧಿಕ ಚಿತ್ರಗಳಲ್ಲಿ ನಿಕ್ಕಿ ನಟಿಸಿದ್ದಾರೆ. ಪರಭಾಷೆಯಲ್ಲಿ ನಿಕ್ಕಿ ಹೆಚ್ಚು ಪರಿಚಿತರಾಗಿದ್ದಾರೆ. ಮಲಯಾಳಂ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ನಿಕ್ಕಿ. ಕನ್ನಡದ ಕೆಲ ಚಿತ್ರಗಳಲ್ಲೂ ಅವರು ನಟಿಸಿದ್ದಾರೆ. ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರುತ್ತಾರೆ. ಆದಿ ಅವರು ಟಾಲಿವುಡ್ ಹಾಗೂ ತಮಿಳು ಚಿತ್ರರಂಗದಲ್ಲಿ ಬೇಡಿಕೆ ಹೊಂದಿರುವ ನಟರ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ. ಇದನ್ನೂ ಓದಿ: RRR ಸಿನಿಮಾದಲ್ಲಿ ತಾಂತ್ರಿಕ ದೋಷ- ಥಿಯೇಟರ್ ಗಾಜು ಹೊಡೆದ ಫ್ಯಾನ್ಸ್, ಟಿಕೆಟ್ ದರ ವಾಪಸ್