ಪ್ರೀತಿಸಿದ ಹುಡುಗಿ ಜೊತೆಯೇ ಮದುವೆಯಾದ ಕಾಮಿಡಿ ಕಲಾವಿದ ಸಂಜು ಬಸಯ್ಯ

Public TV
1 Min Read
Sanju Basayya 3

ಕಾಮಿಡಿ ಕಿಲಾಡಿಗಳು ಶೋ ಮೂಲಕ ಮನೆಮಾತಾಗಿದ್ದ ರಂಗಭೂಮಿಯ ಹಾಸ್ಯ ಕಲಾವಿದ ಸಂಜು ಬಸಯ್ಯ (Sanju Basayya), ತಾವು ಪ್ರೀತಿಸುತ್ತಿದ್ದ (Love)ಹುಡುಗಿಯ ಜೊತೆ ಮದುವೆಯಾಗಿದ್ದಾರೆ. ಹಲವು ದಿನಗಳಿಂದ ಅವರು ಪಲ್ಲವಿ ಬಳ್ಳಾರಿ (Pallavi Bellary) ಎನ್ನುವವರನ್ನು ಪ್ರೀತಿಸುತ್ತಿದ್ದರು. ಇವರು ಪ್ರೀತಿಸುತ್ತಿದ್ದ ವಿಷಯ ಗಾಸಿಪ್ ಕಾಲಂನಲ್ಲಿ ಕೂಡ ಕಾಣಿಸಿಕೊಂಡಿತ್ತು. ಇದೀಗ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದೆ. ಈ ವಿಷಯವನ್ನು ಸ್ವತಃ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

Sanju Basayya 2

ಸೋಷಿಯಲ್ ಮೀಡಿಯಾದಲ್ಲಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿರುವ ಸಂಜು ಬಸಯ್ಯ, ‘ಕನ್ನಡದ ಕಲಾಭಿಮಾನಿಗಳಿಗೆ ನಿಮ್ಮ ಪ್ರೀತಿಯ ಸಂಜು ಬಸಯ್ಯ ಮತ್ತು ಪಲ್ಲವಿ ಬಳ್ಳಾರಿ ಮಾಡುವ ಅನಂತ ಕೋಟಿ ನಮಸ್ಕಾರಗಳು’ ಎಂದು ಶುರು ಮಾಡಿ. ತಮ್ಮ ಲವ್ ಸ್ಟೋರಿಯನ್ನೂ ಕೂಡ ಬಹಿರಂಗಗೊಳಿಸಿದ್ದಾರೆ. ಇದನ್ನೂ ಓದಿ:ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್‌ ಎಂಗೇಜ್‌ಮೆಂಟ್

Sanju Basayya 1

ಇಲ್ಲಿಯವರೆಗಿನ ನನ್ನ ಹಾಗೂ ಪಲ್ಲವಿ ಬಳ್ಳಾರಿಯವರ ನಡುವಿನ ಸಂಬಂಧಗಳ ಊಹಾಪೋಹಗಳಿಗೆ ಇಂದು ನಾವು  ತೆರೆ ಎಳೆದಿದ್ದೆವೆ. ಮೊದಲಿಗೆ ನಮ್ಮಿಬ್ಬರ ಪರಿಚಯವಾಗಿತು, ಆ ಪರಿಚಯ ಸ್ನೇಹವಾಗಿ, ಸ್ನೇಹ  ಪ್ರೀತಿಯಾಗಿದ್ದು ನಿಮಗೆಲ್ಲರಿಗೂ ಗೊತ್ತಿದ್ದ ವಿಷಯ. ಈಗ ನಾವಿಬ್ಬರು ಕಾನೂನಬದ್ದವಾಗಿ, ಅಧಿಕೃತವಾಗಿ, ರಿಜಿಸ್ಟರ್ ಮ್ಯಾರೇಜ್ (Marriage) ಆಗಿದ್ದೇವೆ.

ನಮ್ಮ, ನಮ್ಮ ಕುಟುಂಬದ ಒಪ್ಪಿಗೆ ಪಡೆದು ನಿಮ್ಮೆಲ್ಲರ ಸುಮ್ಮುಖದಲ್ಲಿ ಆದಷ್ಟು ಬೇಗ ಸಪ್ತಪದಿ ತುಳಿಯಲಿದ್ದೇವೆ. ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಮೇಲೆ ಹೀಗೆ ಇರಲಿ. ನಿಜವಾದ ಪ್ರೀತಿಗೆ ಯಾವುದೇ ಜಾತಿ, ಧರ್ಮ, ಇನ್ನಿತರ ಯಾವುದೇ ವಿಷಯಗಳು ಅಡ್ಡ ಬರಲಾರದು ಎಂಬುದನ್ನು ಸಾಧಿಸಿ ತೋರಿಸಿದ್ದೇವೆ. ನಿಜವಾದ ಪ್ರೀತಿಗೆ ಜಯ ಸಿಕ್ಕೆ ಸಿಗುತ್ತದೆ ಎನ್ನುವುದಕ್ಕೆ ನಾವೇ ಕಾರಣ ಎಂದು ಸಂಜು ಮತ್ತು ಪಲ್ಲವಿ ಬರೆದುಕೊಂಡಿದ್ದಾರೆ.

Share This Article