– T20Iನಲ್ಲಿ ಬಾಂಗ್ಲಾಗೆ ಟೀಂ ಇಂಡಿಯಾ 298 ರನ್ ಗುರಿ
ಹೈದರಾಬಾದ್: ಇಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯದ ವೇಳೆ ಭಾರತದ ವಿಕೆಟ್‌ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಶನಿವಾರ ತಮ್ಮ ಚೊಚ್ಚಲ T20I ಶತಕವನ್ನು ಸಿಡಿಸಿದ್ದಾರೆ.
Advertisement
ಸ್ಯಾಮ್ಸನ್ ಕೇವಲ 40 ಎಸೆತಗಳಲ್ಲಿ ಶತಕದ ಮೈಲುಗಲ್ಲು ತಲುಪಿದರು. T20I ನಲ್ಲೇ ವೇಗದ ಶತಕ ಸಿಡಿಸಿದ ಎರಡನೇ ಭಾರತೀಯ ಎಂಬ ದಾಖಲೆಯನ್ನು ಮಾಡಿದ್ದಾರೆ. ವೇಗದ ಶತಕದ ಹಾದಿಯಲ್ಲಿ ಭಾರತದ ಇನ್ನಿಂಗ್ಸ್‌ನ 10 ನೇ ಓವರ್‌ನಲ್ಲಿ ಸತತ ಐದು ಸಿಕ್ಸರ್‌ಗಳನ್ನು ಸಿಡಿಸಿ ಅಬ್ಬರಿಸಿದರು. ಕೊನೆಗೆ 117 (47) ರನ್ ಗಳಿಸಿ, ಮುಸ್ತಾಫಿಜುರ್ ರೆಹಮಾನ್ ಬೌಲಿಂಗ್‌ನಲ್ಲಿ ಔಟಾದರು.
Advertisement
ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಭಾರತ ಈಗಾಗಲೇ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇಂದು ತಂಡ ಗೆದ್ದರೆ ಬಾಂಗ್ಲಾದೇಶದ ವಿರುದ್ಧ ಕ್ಲೀನ್ ಸ್ವೀಪ್ ಮಾಡಲು ಸಹಾಯವಾಗುತ್ತದೆ.
Advertisement
ಭಾರತ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 297 ರನ್ ಗಳಿಸಿದೆ.