ಸಕ್ಕರೆನಾಡು ಮಂಡ್ಯ ಕೇಸರಿಮಯ – ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ

Public TV
2 Min Read
Mandya Keerthana

ಮಂಡ್ಯ: ಶ್ರೀರಂಗಪಟ್ಟಣದ (Srirangapatna) ಜಾಮಿಯಾ ಮಸೀದಿಯ (Jamiya Masjid) ವಿವಾದ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ಪ್ರತಿ ವರ್ಷದಂತೆ ಇಂದು ಜಾಮಿಯಾ ಮಸೀದಿ ಜಾಗದಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ ಮಾಡುವ ಪ್ರತಿಜ್ಞೆ ಮಾಡಿ ಹನುಮ ಮಾಲಧಾರಿಗಳು (Hanuma Maladharis) ಬೃಹತ್ ಸಂಕೀರ್ತನಾ ಯಾತ್ರೆಯನ್ನು ಮಾಡುತ್ತಿದ್ದಾರೆ.

ಸಕ್ಕರೆನಾಡು ಮಂಡ್ಯ ಜಿಲ್ಲೆಯ ಕೋಟೆ ನಗರಿ ಎಂದು ಕರೆಯಲ್ಪಡುವ ಶ್ರೀರಂಗಪಟ್ಟಣದಲ್ಲಿ ಎಲ್ಲಿ ನೋಡಿದರು ಕೇಸರಿ ಮಯವಾಗಿದೆ. ಬೀದಿ ಬೀದಿಗಳಲ್ಲಿ ಕೇಸರಿ ಬಾವುಟ, ಮೂಡಲ ಬಾಗಿಲು ಆಂಜನೇಯಸ್ವಾಮಿಯ ದೇವಸ್ಥಾನದ ಪ್ರಮುಖ ರಸ್ತೆಗಳಲ್ಲಿ ಫ್ಲೆಕ್ಸ್, ಬಂಟಿಂಗ್ಸ್ ರಾರಾಜಿಸುತ್ತಿದೆ. ಈ ಮೂಲಕ ಇಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಸಂಘಟನೆಗಳಿಂದ ನಡೆಯುತ್ತಿರುವ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆಗೆ ಶ್ರೀರಂಗಪಟ್ಟಣ ಸಂಪೂರ್ಣ ಸಜ್ಜಾಗಿದೆ. ಇದನ್ನೂ ಓದಿ: ಫಿಲ್ಮ್‌ ಚೇಂಬರ್‌ ಎಲೆಕ್ಷನ್;‌ ಸಾರಾ ಗೋವಿಂದು ಬಣಕ್ಕೆ ಜಯ – ಅಧ್ಯಕ್ಷರಾಗಿ ನರಸಿಂಹಲು ಆಯ್ಕೆ

Mandya Sankeerthana

ಸದ್ಯ ಶ್ರೀರಂಗಪಟ್ಟಣದಲ್ಲಿ ಇರುವ ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೆ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಇತ್ತು. ದೇವಸ್ಥಾನವನ್ನು ಕೆಡವಿ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾನೆ. ಇದಕ್ಕೆ ಈಗಲೂ ಇಲ್ಲಿರುವ ಕಲ್ಯಾಣಿ, ನಾಗರ ಕಲ್ಲುಗಳು ಸೇರಿದಂತೆ ಇತರ ಕುರುಹುಗಳೇ ಸಾಕ್ಷಿಯಾಗಿವೆ. ಹೀಗಾಗಿ ಜಾಮಿಯಾ ಮಸೀದಿಯನ್ನು ಕೆಡವಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ಮರು ಸ್ಥಾಪನೆ ಮಾಡಲೇಬೇಕೆಂದು ಸಂಕಲ್ಪ ಮಾಡಿ ಹಲವು ವರ್ಷಗಳಿಂದ ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಪರ ಸಂಘಟನೆಗಳು ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆಯನ್ನು ಮಾಡಿಕೊಂಡು ಬಂದಿವೆ. ಅದೇ ರೀತಿ ಇಂದು ಸಹ ಶ್ರೀರಂಗಪಟ್ಟಣದಲ್ಲಿ ಬೃಹತ್ ಸಂಕೀರ್ತನಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: ಟ್ರಂಪ್‌ ರೆಸಾರ್ಟ್‌ನಲ್ಲಿ ಆಪಲ್‌ ಸಿಇಒ ಟಿಮ್‌ ಕುಕ್‌, ಡಿನ್ನರ್‌ನಲ್ಲಿ ಭಾಗಿ

ಇಂದು ನಿಮಿಷಾಂಬ ದೇವಸ್ಥಾನದಿಂದ ಆರಂಭಗೊಳ್ಳುವ ಸಂಕೀರ್ತನಾ ಯಾತ್ರೆ ಜಾಮಿಯಾ ಮಸೀದಿ ಮುಂಭಾಗದಿಂದ ರಂಗನಾಥಸ್ವಾಮಿ ದೇವಸ್ಥಾನದವರೆಗೆ ಜರುಗಲಿದೆ. ಈ ಯಾತ್ರೆಯಲ್ಲಿ ಮಂಡ್ಯ, ಮೈಸೂರು, ಕೊಡಗು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ಹನುಮ ಮಾಲೆಯನ್ನು ಹಾಕಿಕೊಂಡಿರುವ ಸಾವಿರಾರು ಸಂಖ್ಯೆಯ ಹನುಮ ಮಾಲಾಧಾರಿಗಳು ಭಾಗಿಯಾಗಲಿದ್ದಾರೆ. ಅಲ್ಲದೇ ರಾಜ್ಯದ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಬಿಜೆಪಿ ಜೆಡಿಎಸ್ ನಾಯಕರು ಸಹ ಭಾಗಿಯಾಗಲಿದ್ದಾರೆ. ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮಂಡ್ಯ ಪೊಲೀಸ್ ಇಲಾಖೆ ಶ್ರೀರಂಗಪಟ್ಟಣದ್ಯಾಂತ ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದು, ಯಾತ್ರೆ ಸಾಗುವ ದಾರಿಯುದ್ಧಕ್ಕೂ ಸಿಸಿಟಿವಿಗಳನ್ನು ಹಾಕಲಾಗಿದೆ. ಇದನ್ನೂ ಓದಿ: ತೆಂಕುತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಾಡಿತ್ತಾಯ ನಿಧನ

Share This Article