ಮಂಡ್ಯ: ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಾರಿಗಳ ಮೇಲೆ ಯುವಕನೊಬ್ಬ ಹಲ್ಲೆಗೆ ಮುಂದಾದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಇಂದು ಹನುಮ ಜಯಂತಿ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿತ್ತು. ಈ ಸಂಕೀರ್ತನಾ ಯಾತ್ರೆ ವೇಳೆ ಯುವಕನೊಬ್ಬ ಮಧ್ಯಪ್ರವೇಶಿಸಿ, ಹನುಮ ಮಾಲಾಧಾರಿಗಳ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದಾನೆ. ಆದರೆ ಯುವಕನನ್ನು ಹನುಮ ಮಾಲಾಧಾರಿಗಳು ಥಳಿಸಿದ್ದಾರೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಯುವಕನಿಗೆ ಏಟು ನೀಡಿರುವ ಘಟನೆ ನಡೆದಿದೆ.
Advertisement
Advertisement
ಸಂಕೀರ್ತನಾ ಯಾತ್ರೆ ಹೆಸರಲ್ಲಿ ಜಾಮಿಯ ಮಸೀದಿ ದ್ವಂಸಕ್ಕೆ ಸಂಚು ರೂಪಿಸಲಾಗಿದೆ ಎಂದು ಮುಸ್ಲಿಂ ಮುಖಂಡರು ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗಬಾರದೆಂದು ಮೊದಲೇ 1000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿ ಬಿಗಿ ಭದ್ರತೆ ನೀಡಲಾಗಿತ್ತು. ಇದನ್ನೂ ಓದಿ: ಮೈಸೂರಿನಲ್ಲಿ ಒಂದೇ ದಿನ 2 ಸರಕಳ್ಳತನ – ಆರೋಪಿಗಳು ಪರಾರಿ
Advertisement
Advertisement
ಜಾಮೀಯಾ ಮಸೀದಿಗೆ ಭಾರಿ ಬಂದೋಬಸ್ತ್ ಮಾಡಿ, ಮಸೀದಿ ಸುತ್ತ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಅಷ್ಟೇ ಅಲ್ಲದೇ ಸಾರ್ವಜನಿಕರಿಗೆ ಮಸೀದಿ ಪ್ರವೇಶ ನಿರ್ಬಂಧ ಹೇರಲಾಗಿತ್ತು. ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೇಡೌನ್ ಮೇಲೆ ಅಧಿಕಾರಿಗಳ ದಾಳಿ