ಬೆಂಗಳೂರು: ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಎಸ್ಎಂವಿಟಿ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ 06245/06246 ಎಸ್ಎಂವಿಟಿ ಬೆಂಗಳೂರು-ವಿಜಯಪುರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು (2 ಟ್ರಿಪ್‌ಗಳು). ಇದನ್ನೂ ಓದಿ: ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ: ಪರಮೇಶ್ವರ್
ರೈಲು ಸಂಖ್ಯೆ 06245 ಎಸ್ಎಂವಿಟಿ ಬೆಂಗಳೂರು-ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಜ.13 (ಮಂಗಳವಾರ) ಮತ್ತು ಜ.23 (ಶುಕ್ರವಾರ) ರಂದು ರಾತ್ರಿ 07:15 ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ವಿಜಯಪುರ ತಲುಪುತ್ತದೆ. (2 ಟ್ರಿಪ್‌ಗಳು).
ರೈಲು ಸಂಖ್ಯೆ 06246 ವಿಜಯಪುರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಜ.18 (ಭಾನುವಾರ) ಮತ್ತು ಜ.26 (ಸೋಮವಾರ) ರಂದು ಸಂಜೆ 05:30 ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಗ್ಗೆ 06:30 ಕ್ಕೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣವನ್ನು ತಲುಪುತ್ತದೆ. (2 ಟ್ರಿಪ್‌ಗಳು).
ಮಾರ್ಗದಲ್ಲಿ, ಈ ರೈಲುಗಳಿಗೆ (06245/46) ಬಾಣಸವಾಡಿ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಸ್‌ಎಸ್ ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಒದಗಿಸಲಾಗಿದೆ. ಇದನ್ನೂ ಓದಿ: ಈ ರಾಜ್ಯಕ್ಕೆ ಸಿದ್ದರಾಮಯ್ಯನವರ ಅವಶ್ಯಕತೆ ಇದೆ: ಹೆಚ್‌ಸಿ ಬಾಲಕೃಷ್ಣ
ಈ ರೈಲು 22 ಬೋಗಿಗಳನ್ನು ಒಳಗೊಂಡಿರುತ್ತದೆ. ಅವುಗಳಲ್ಲಿ 02 ಎಸಿ 2-ಟೈರ್, 03 ಎಸಿ 3-ಟೈರ್, 11 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.

