ಬೆಂಗಳೂರು: ನಾಡಿನಾದ್ಯಂತ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಸಂಭ್ರಮ ಜೋರಾಗಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತಿವೆ. ಅಗತ್ಯ ವಸ್ತುಗಳ ಖರೀದಿಗೆ ಜನ ಮಾರುಕಟ್ಟೆಗೆ ದಾಂಗುಡಿ ಇಡುತ್ತಿದ್ದಾರೆ. ಸಂಜೆಯಾಗುತ್ತಿದ್ದಂತೆ ರಾಸುಗಳಿಂದ ಕಿಚ್ಚು ಹಾಯಿಸಲು ಭರ್ಜರಿ ತಯಾರಿ ನಡೆಸಿದ್ದಾರೆ
ಇನ್ನೂ ಸ್ನೇಹಿತರು, ಬಂಧು-ಬಾಂಧವರು ಪರಸ್ಪರ ಶುಭಕೋರುತ್ತಿದ್ದಾರೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಮೇಯರ್ ಚುನಾವಣೆ : ಮಾಲ್ಡೀವ್ಸ್ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ
ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಬ್ಬದ ಶುಭ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೇಶದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಅಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ರಾಜ್ಯದ ಗಣ್ಯಮಾನ್ಯರೂ ಹಬ್ಬಕ್ಕೆ ಶುಭಹಾರೈಸಿದ್ದಾರೆ.
ಡಿ.ಕೆ ಶಿವಕುಮಾರ್:
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಬಾರಿಯ ಸುಗ್ಗಿ ಹಬ್ಬವು ನಮ್ಮ ನಾಡಿಗೆ ಹಾಗೂ ರೈತರ ಬದುಕಲ್ಲಿ ಸುಖ, ಶಾಂತಿ, ನೆಮ್ಮದಿ ತರಲಿ ಎಂದು ಹಾರೈಸುತ್ತೇನೆ.
ಹೆಚ್.ಡಿ ಕುಮಾರಸ್ವಾಮಿ
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ತೇಜೋಮಯನಾದ ಸೂರ್ಯ ದೇವನು ಪಥ ಬದಲಿಸುವ ಈ ಉತ್ತರಾಯಣ ಪುಣ್ಯಕಾಲವು ಎಲ್ಲರ ಬದುಕಿನಲ್ಲೂ ಸುಖ-ಶಾಂತಿ, ನೆಮ್ಮದಿ-ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ. ಇದನ್ನೂ ಓದಿ: ಕಲಬುರಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮನೆಗೆಲಸ, ಟಾಯ್ಲೆಟ್ ಕ್ಲಿನಿಂಗ್ – ಮುಖ್ಯಶಿಕ್ಷಕಿ ವಿರುದ್ಧ FIR
ಬಸವರಾಜ ಬೊಮ್ಮಾಯಿ:
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಸೂರ್ಯ ಪಥ ಬದಲಿಸುವ ಈ ಶುಭ ಸಂದರ್ಭದಲ್ಲಿ ನಾಡಿನೆಲ್ಲೆಡೆ ಸುಖ, ಶಾಂತಿ ನೆಮ್ಮದಿ ಹಾಗೂ ಸಮೃದ್ಧಿ ನೆಲೆಸಲಿ, ಎಲ್ಲರಿಗೂ ಶುಭವಾಗಲಿ.
ಬಿ.ಎಸ್ ಯಡಿಯೂರಪ್ಪ:
ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಉತ್ತರಾಯಣ ಪರ್ವಕಾಲವು ಎಲ್ಲರ ಬದುಕಿನಲ್ಲೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿಗಳ ಹೊಂಬೆಳಕನ್ನು ಹರಡಲಿ ಎಂದು ಹಾರೈಸುತ್ತೇನೆ.
ಬಿ.ವೈ ವಿಜಯೇಂದ್ರ:
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ರೈತ ಕಾಯಕದ ಸಂಭ್ರಮಕ್ಕೆ ಸಾಕ್ಷಿಯಾಗಿರುವ ಸುಗ್ಗಿಯ ಹಬ್ಬವು ನಾಡಿನೆಲ್ಲೆಡೆ ನೆಮ್ಮದಿ ನೆಲೆಸಿ, ಎಲ್ಲರ ಬದುಕಿನಲ್ಲಿ ಸುಖ, ಸಂತೋಷ, ಸಮೃದ್ಧಿಯನ್ನು ಹೊತ್ತು ತರಲೆಂದು ಶುಭ ಹಾರೈಸುತ್ತೇನೆ.