ಮೈಸೂರು: ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದೆ. ಭ್ರಷ್ಟಾಚಾರಿಗಳಿಗೆ ಇದರಿಂದ ನಡುಕ ಹುಟ್ಟಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.
ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ಹೈಕೋರ್ಟ್ ರದ್ದುಪಡಿಸಿದ್ದ ಬಗ್ಗೆ ಮಾತನಾಡಿದ ಅವರು, ಮೂರು ಪಕ್ಷದಲ್ಲಿ ಕೂಡ ಈ ತೀರ್ಪನ್ನು ವಿರೋಧಿಸಬಹುದು. ಕಾರಣ ಲೋಕಾಯುಕ್ತ ಇದ್ದ ವೇಳೆ ಸಾಕಷ್ಟು ಪ್ರಕರಣಗಳಲ್ಲಿ ಶಿಕ್ಷೆ ಆಗಿತ್ತು. ಎಸಿಬಿ ಬಂದ ಬಳಿಕ ಯಾವೊಬ್ಬ ರಾಜಕಾರಣಿ ಮೇಲೆ, ಅಧಿಕಾರಿಯ ಮೇಲೆ ಕ್ರಮ ಜರುಗಿಸಿರಲಿಲ್ಲ. ಲೋಕಾಯುಕ್ತಕ್ಕೆ ಸ್ವಾತಂತ್ರ್ಯವಾದ ಅಧಿಕಾರ ಹಾಗೂ ಸವಲತ್ತುಗಳನ್ನು ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿ ರದ್ದು – ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಮರುಜೀವ
Advertisement
Advertisement
ಈ ಮೂಲಕ ಲೋಕಾಯುಕ್ತವನ್ನು ಬಲಪಡಿಸಬೇಕು. ಎಸಿಬಿಯಲ್ಲಿ ಈವರಗೆ ಸಾವಿರಾರು ಕೇಸ್‌ಗಳು ದಾಖಲಾಗಿವೆ. ಆದರೆ ಯಾರಿಗೂ ಶಿಕ್ಷೆ ಆಗಿಲ್ಲ ಎಂಬುದೇ ಬೇಸರ. ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಶಿಕ್ಷೆಯೇ ಆಗಿಲ್ಲ. ಮಂತ್ರಿ ಇರಲಿ ಒಬ್ಬ ಶಾಸಕನನ್ನು ಕೂಡ ಎಸಿಬಿ ವಿಚಾರಣೆ ಮಾಡಿಲ್ಲ. ನಮ್ಮ ನಿಮ್ಮಂತವರು ತಪ್ಪು ಮಾಡಿದರೆ ಹೀಗೆ ನಡೆದುಕೊಳ್ಳುತ್ತಿದ್ದರಾ ಎಂದು ಪ್ರಶ್ನಿಸಿದರು.
Advertisement
Advertisement
ಸರ್ಕಾರಿ ಅಧಿಕಾರಿಗಳು ತನಿಖೆ ಮಾಡಬೇಕಾದರೆ ಸರ್ಕಾರದ ಅನುಮತಿ ಕೇಳುತ್ತಾರೆ. ಇದು ಬ್ರಿಟಿಷ್ ಆಡಳಿತದ ಕಾನೂನು. ಅಂದಿನ ಬ್ರಿಟಿಷರು ತಮ್ಮ ಪ್ರಾಬಲ್ಯಕ್ಕಾಗಿ ಈ ನಿಯಮ ಜಾರಿಗೆ ತಂದಿದ್ದರು. ಆದರೆ ಇಂದು ನಮ್ಮದೇ ಸರ್ಕಾರ ಇರುವಾಗ ಸರ್ಕಾರದ ಅನುಮತಿ ಯಾಕೆ ಬೇಕು? ಸಾಮಾನ್ಯ ಜನರನ್ನು ನೇರವಾಗಿ ತನಿಖೆ ಮಾಡುತ್ತಾರೆ. ಆದರೆ ಅಧಿಕಾರಿಗಳನ್ನು ತನಿಖೆ ಮಾಡಬೇಕಾದರೆ ಸರ್ಕಾರದ ಅನುಮತಿ ಏಕೆ ಎಂದು ಕೇಳಿದರು. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ- ಎಲ್ಲರ ಮನೆ ಮೇಲೆ ತಿರಂಗಾ ಹಾರಿಸುವಂತೆ ಸಿಎಂ ಮನವಿ