ಧಾರವಾಡ: ವಿಧಾನ ಸೌಧದ ವೆಸ್ಟ್ ಗೇಟ್ ಬಳಿಯ ರಕ್ಷಣಾ ಸಿಬ್ಬಂದಿಗೆ ತಪಾಸಣೆ ವೇಳೆ ಭಾರೀ ಮೊತ್ತದ ಹಣ ಸಿಕ್ಕಿರುವುದು ಭ್ರಷ್ಟಾಚಾರಿಗೆ ಎಷ್ಟು ಧೈರ್ಯವಿದೆ ಎನ್ನುವುದನ್ನು ತೋರಿಸುತ್ತದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ನಗರದಲ್ಲಿ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸೌಧದ ಬಳಿ ಹಣ ಸಿಕ್ಕಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಇಂತಹ ಘಟನೆ ನಡೆದಿತ್ತು. ಆದರೆ ಇದು ಭ್ರಷ್ಟಾಚಾರದ ವಿಚಾರವಲ್ಲ. ಭ್ರಷ್ಟಾಚಾರಿಗಳಿಗೆ ಎಷ್ಟು ಧೈರ್ಯವಿದೆ ಎನ್ನುವುದು ತೋರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
Advertisement
Advertisement
ಮಂತ್ರಿಗಳ ಆಪ್ತ ಸಹಾಯಕರೇ ಘಟನೆಯಲ್ಲಿ ಸಿಕ್ಕಿಹಾಕಿಕೊಂಡಿದ್ದು. ಇದರಲ್ಲಿ ಮಂತ್ರಿಗಳದ್ದು ಎಷ್ಟಿದೆ ಎಂಬುವುದು ಹೇಳುವುದಕ್ಕೆ ಹೋಗುವುದಿಲ್ಲ. ಆದರೆ ಮಂತ್ರಿಗಳ ಪಿಎ ಗಳಿಗೆ ಅಷ್ಟು ಹಣ ಯಾರು ಕೊಡೋದಿಲ್ಲ. ಇದರಲ್ಲಿ ದೊಡ್ಡವರ ಕೈವಾಡವಿದೆ ಎಂದು ಅನ್ನಿಸುತ್ತದೆ. ಈ ಕುರಿತು ಸಮಗ್ರ ತನಿಖೆಯಾಗಬೇಕು. ಯಾರ ಕೈವಾಡವಿದೆ ಎನ್ನುವುದು ತಿಳಿಯಬೇಕಿದೆ ಆಗ್ರಹಿಸಿದರು. ಇದನ್ನು ಓದಿ: ವಿಧಾನಸೌಧದ ಗೇಟ್ ಬಳಿ ಹಣ ಸಿಕ್ಕ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್
Advertisement
ಈ ಘಟನೆಯ ಮೂಲಕ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಾ ಎಂಬುವುದು ತಿಳಿಯುತ್ತದೆ. ವಿಚಾರಣೆ ಮಾಡದೇ ಇದ್ದರೆ, ಅದು ಬೇರೆ ಆರ್ಥ ಪಡೆದುಕೊಳ್ಳುತ್ತೆ ಎಂದರು ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv