ದಾವಣಗೆರೆ: ರಾಜಕೀಯದಲ್ಲಿ ಹೆಚ್ಚು ಸಂಪಾದನೆ ಮಾಡಬಹುದು ಎಂದುಕೊಂಡು ಐಎಎಸ್ ಅಧಿಕಾರಿಗಳು, ಗುಂಡಾಗಳು ರಾಜಕೀಯಕ್ಕೆ ಬರುತ್ತಿದ್ದಾರೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ (Santosh Hegde) ತಿಳಿಸಿದರು.
ದಾವಣಗೆರೆಯ (Davanagere) ಜಿಲ್ಲಾಧಿಕಾರಿಗಳ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ನಡೆದ ಸರ್ಕಾರಿ ನೌಕರರ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ರಾಜಕೀಯಯಕ್ಕೆ ರೌಡಿ ಶೀಟರ್‌ಗಳು, ಐಎಎಸ್ ಅಧಿಕಾರಿಗಳು ಸೇರಿದಂತೆ ಹಲವರು ಸಾಲುಗಟ್ಟಿ ಹೋಗುತ್ತಿದ್ದಾರೆ. ಯಾಕೆಂದರೆ ಇಲ್ಲಿ ಲಾಭ ಇದೆ ಎಂದು ಅವರಿಗೆ ತಿಳಿದಿದೆ. ಎಲ್ಲಿಯೂ ಇಲ್ಲದ ಸಂಪಾದನೆ ರಾಜಕೀಯದಲ್ಲಿ ಇದೆ ಎಂದು ಬರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಇದಕ್ಕೆಲ್ಲ ಕಡಿವಾಣ ಬೀಳಬೇಕು. ಈ ವ್ಯವಸ್ಥೆ ಬಹಳಷ್ಟು ಸುಧಾರಣೆ ಆಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲು
Advertisement
Advertisement
ಮತದಾರರ ಪಟ್ಟಿ ಅಕ್ರಮದ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಈ ಅವ್ಯವಹಾರ ಸಂವಿಧಾನ ವಿರುದ್ಧವಾಗಿದೆ. ಈ ನೆಲದ ಕಾನೂನುಗಳಿಗೆ ವಿರುದ್ಧವಾಗಿದೆ. ಅಲ್ಲದೆ ಯಾರು ಇದನ್ನು ಸರಿ ಅಂತ ಒಪ್ಪಿಕೊಳ್ಳಲು ಆಗಲ್ಲ. ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯಾಗಿದೆ. ಇಂತಹ ಸಂಸ್ಥೆಯಲ್ಲಿ ಅವ್ಯವಹಾರ ಆಗ್ತಾ ಇದೆ. ಈ ಎಲ್ಲಾ ಘಟನೆಗಳನ್ನು ನೋಡುತ್ತಿದ್ದರೆ ಪ್ರಜಾಪ್ರಭುತ್ವ ಮಟ್ಟ ಎತ್ತ ಸಾಗುತ್ತಿದೆ ಅರ್ಥ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ಈಗ ಲೋಕಾಯುಕ್ತ ಅಧಿಕಾರ ಕೊಟ್ಟಿದ್ದಾರೆ. ಅದು ಹೇಗೆ ಆಡಳಿತ ನಡೆಸುತ್ತದೆ ಎನ್ನುವುದು ಕಾದು ನೋಡೋಣ ಎಂದರು. ಇದನ್ನೂ ಓದಿ: ಪಂಡಿತರಿಗೆ ಕೇಂದ್ರದಿಂದ ಗುಡ್‍ನ್ಯೂಸ್ – ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಪ್ರಾತಿನಿಧ್ಯ ನೀಡಲು ಚಿಂತನೆ