ಧಾರವಾಡ: ಮದ್ಯಪ್ರಿಯರ ಕೆಲವೊಂದಿಷ್ಟು ಬೇಡಿಕೆಗಳು ನ್ಯಾಯಯುತವಾಗಿವೆ. ಮದ್ಯದ ಬಾಟಲಿಯ ಮೇಲೆ ವಿಮೆ ಮಾಡುವಂತೆ ಮದ್ಯಪ್ರಿಯರು ಬೇಡಿಕೆ ಇಟ್ಟಿದ್ದಾರೆ. ಇದು ಚರ್ಚಿಸುವ ವಿಚಾರ ಎಂದು ಸಚಿವ ಸಂತೋಷ್ ಲಾಡ್ (Santosh Lad) ಹೇಳಿದ್ದಾರೆ.
ಧಾರವಾಡದಲ್ಲಿ (Santosh Lad) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಸುವರ್ಣಸೌಧದ (Suvarna Vidhana Soudha) ಎದುರು ಮದ್ಯಪ್ರಿಯರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಮದ್ಯದ ಬಾಟಲಿ ಮೇಲೆ ವಿಮೆ ಮಾಡಿದರೆ, ವಿಮೆ ಕಟ್ಟಲು ಅವರು ತಯಾರಿದ್ದಾರೆ. ಇದು ಎರಡೂ ಕಡೆ ಲಾಭ ಆಗುತ್ತದೆ. ವಿಮೆಯಿಂದ ಅವರ ಆರೋಗ್ಯಕ್ಕೆ ವಿಮೆ ಅನುಕೂಲ ಆಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಖಾಸಗಿ ಆಸ್ಪತ್ರೆ ಮಾಲೀಕನೂ ಆಗಿರುವ ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್
Advertisement
Advertisement
ಮದ್ಯಪ್ರಿಯರ ಬೇಡಿಕೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಜೊತೆಗೆ ಚರ್ಚೆ ಮಾಡುತ್ತೇನೆ. ಇದು ಅವರ ಒಳ್ಳೆಯ ಸಲಹೆ. ಈ ಬೇಡಿಕೆಯ ಬಗ್ಗೆ ಚರ್ಚಿಸುವ ಅಗತ್ಯವಿದೆ ಎಂದು ನಗುತ್ತ ಪ್ರತಿಕ್ರಿಯಿಸಿದ್ದಾರೆ.
Advertisement
Advertisement
ಬಳಿಕ ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದ್ದು, ಈ ಬಗ್ಗೆ ಇಲಾಖೆಯೊಂದಿಗೆ ಮಾತನಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಾಫಿಕ್ ಜಾಮ್ – 3 ಕಿಮೀ ವರೆಗೆ ನಿಂತ ವಾಹನಗಳು; 2 ಗಂಟೆ ಪ್ರಯಾಣಿಕರ ಪರದಾಟ