ಧಾರವಾಡ: ನನಗಿರುವ ಮಾಹಿತಿ ಪ್ರಕಾರ ನರೇಂದ್ರ ಮೋದಿ (Narendra Modi) ಅವರು ಇನ್ನೊಂದು ವರ್ಷ ಮಾತ್ರ ಪ್ರಧಾನಿಯಾಗಿರುತ್ತಾರೆ. ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ತಿರುಗೇಟು ನೀಡಿದರು.
ಧಾರವಾಡದಲ್ಲಿ (Dharwad) ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸ್ವ ಪಕ್ಷದವರೇ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿಕೆಗೆ ಕೌಂಟರ್ ನೀಡಿದರು. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ – ಹಿಂದೂಗಳ ಮನೆಗೆ ಬೆಂಕಿ, ಯವತಿಯರಿಗೆ ಲೈಂಗಿಕ ಕಿರುಕುಳ
ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯಾರೂ ಪ್ರಯತ್ನ ನಡೆಸುತ್ತಿಲ್ಲ. ಯತ್ನಾಳ್ ಅವರು ಯಾಕೆ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಆ ಬಗ್ಗೆ ಅವರನ್ನೇ ಕೇಳಬೇಕು. ಆದರೂ ಯತ್ನಾಳ್ ಅವರು ನಮ್ಮ ಸಿಎಂ ಬಗ್ಗೆ ಗೌರವ ಪೂರ್ವಕವಾಗಿ ಮಾತನಾಡಿದ್ದಾರೆ. ಅದು ನನಗೆ ಖುಷಿ ತಂದಿದೆ ಎಂದರು. ಇದನ್ನೂ ಓದಿ: KGF 3 ಮೇಲಿನ ನಿಮ್ಮ ನಿರೀಕ್ಷೆಯನ್ನು ಸುಳ್ಳು ಮಾಡಲ್ಲ- ಗುಡ್ ನ್ಯೂಸ್ ಕೊಟ್ಟ ಹೊಂಬಾಳೆ ಸಂಸ್ಥೆ
ಮೋದಿ ಅವರು ಮುಂದಿನ ವರ್ಷ ಪಿಎಂ ಆಗಿ ಇರುವುದಿಲ್ಲ. ಇದನ್ನು ಬಿಜೆಪಿಯವರು ಯಾರೂ ಹೇಳಿಕೊಳ್ಳುತ್ತಿಲ್ಲ. ಆದರೆ, ಅಲ್ಲಲ್ಲಿ ಸ್ವಲ್ಪ ಬಾಯಿ ಬಿಡುತ್ತಿದ್ದಾರೆ. ಮೊನ್ನೆಯಷ್ಟೇ ಪಿಯೂಷ್ ಗೋಯಲ್ ಮಾತನಾಡಿ, ಸ್ಕಿಲ್ ಇಂಡಿಯಾ, ಸ್ಕಿಲ್ ಡೆವಲಪ್ ಆಗಿಲ್ಲ ಎಂದಿದ್ದಾರೆ. ಮೋದಿ ಅವರ ವಿರುದ್ಧ ನನಗೆ ವೈಯಕ್ತಿಕ ದ್ವೇಷ ಇಲ್ಲ. ಈ ದೇಶದಲ್ಲಿ ಕಾಂಗ್ರೆಸ್, ಬಿಜೆಪಿ ಎರಡೂ ಇರಬೇಕು. ಮೋದಿ ಅವರು 11 ವರ್ಷದಿಂದ ಪ್ರಧಾನಿಯಾಗಿದ್ದಾರೆ. ದೇಶದಲ್ಲಿ ಏನೂ ಬೆಳವಣಿಗೆ ಆಗಿಲ್ಲ. ಹೀಗಾಗಿ ನಿತಿನ್ ಗಡ್ಕರಿ ಪಿಎಂ ಆಗಲಿ ಎಂದು ಅವರ ಪಕ್ಷದವರೇ ಅಪೇಕ್ಷಿಸುತ್ತಿದ್ದಾರೆ. ಅವರಿಗೂ ಒಂದು ಅವಕಾಶ ಸಿಗಬೇಕು ಎಂದು ಹೇಳಿದರು.