ಬೆಳಗಾವಿ: ಬಿಜೆಪಿ ಕಾರ್ಯಕರ್ತನ ಬಳಿ 40% ಕಮಿಷನ್ ವಸಲಿ ಮಾಡುವುದು ರಾಕ್ಷಸ ಪ್ರವೃತ್ತಿ ಆಗಿದ್ದು, ಇದೇ ರೀತಿ ಎಲ್ಲಾ ಇಲಾಖೆಯಲ್ಲೂ ಕಮಿಷನ್ ಆರೋಪ ನಡೆಯುತ್ತಿದೆ. ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಪತ್ರ ಬರೆದು ಅನೇಕ ಆರೋಪ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಅರುಣ್ ಸಿಂಗ್ ಸಮರ್ಥರಾಗಿದ್ದಾರೆ. ಸಂತೋಷ್ ಪಾಟೀಲ್ ಬಿಜೆಪಿಗೆ ಆಸ್ತಿಯಾಗಿದ್ದರು. ನಾವ್ಯಾರು ಇಲ್ಲಿ ರಾಜಕೀಯ ಮಾಡಲು ಬಂದಿಲ್ಲ. ಇದು ವಾಸ್ತವ ಎಂದು ಹೇಳಿದರು. ಇದನ್ನೂ ಓದಿ: ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಾಯಿ
ಗ್ರಾಪಂ ಅಧ್ಯಕ್ಷ ಹೇಳಿದ್ದು ಸತ್ಯ. ಈಶ್ವರಪ್ಪ ಹೇಳದೇ ಯಾರು ಕೆಲಸ ಮಾಡಲು ಆಗಲ್ಲ. ಸಚಿವರ ಸೂಚನೆ ಮೇಲೆ ಕೆಲಸ ಮಾಡಿದ್ದಾರೆ. ವರ್ಕ್ ಆರ್ಡರ್ ಕೊಟ್ಟಿಲ್ಲ. ಸಾಲ ಸೋಲ ಮಾಡಿ ಸಂತೋಷ್ ಕೆಲಸ ಮಾಡಿದ್ದಾನೆ. ಪತ್ನಿಯ ಒಡವೆಯನ್ನು ಅಡಯಿಟ್ಟು ಸಾಲ ಮಾಡಿದ್ದಾರೆ. ಈಶ್ವರಪ್ಪ ಪಿಎಗಳು ಕಮಿಷನ್ ಕೇಳಿದ್ದಾರೆ. ಬಿಜೆಪಿ ಕಾರ್ಯಕರ್ತನ ಬಳಿ 40% ಕಮಿಷನ್ ವಸೂಲಿ ಮಾಡುವುದು ರಾಕ್ಷಸ ಪ್ರವೃತ್ತಿಯಾಗಿದೆ. ಎಲ್ಲಾ ಇಲಾಖೆಯಲ್ಲಿ ಕಮಿಷನ್ ಆರೋಪ ನಡೆಯುತ್ತಿದೆ ಎಂದು ದೂರಿದರು. ಇದನ್ನೂ ಓದಿ: ಗ್ಯಾಸ್ ಸಿಲಿಂಡರ್‌ನಲ್ಲಿ 50 ಲೀಟರ್ ಮದ್ಯ ಸಾಗಿಸುತ್ತಿದ್ದ ಚಾಲಾಕಿ ಬಂಧನ
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪತ್ರ ಬರೆದು ಅನೇಕ ಆರೋಪ ಮಾಡಿದ್ದಾರೆ. ಪ್ರಧಾನಿ ಸೇರಿ ಅನೇಕ ನಾಯಕರಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ಕ್ರಮ ವಹಿಸಿ ಎಂದು ಸಿಎಂಗೆ ಹೇಳಿದ್ದಾರೆ. ನಾವು ಇದನ್ನು ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶ ಕೇಳಿದ್ದೇವು. ನಮಗೆ ಅವಕಾಶ ಸಿಗಲಿಲ್ಲ. ಬೆತ್ತಲೆ ಆಗುತ್ತೇವೆ ಎನ್ನುವ ಭಯ ಬಿಜೆಪಿಗೆ ಇದೆ. ಈಶ್ವರಪ್ಪನ ಭಂಡ, ಮಾನ ಮರ್ಯಾದೆ ಇಲ್ಲದೇ ಇರುವವರಿಗೆ ಏನು ಹೇಳೊಕೆ ಆಗಲ್ಲ ಎಂದು ಕಿಡಿಕಾರಿದರು.