ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅಂದಿನ ಜಿಲ್ಲಾ ಪಂಚಾಯತ್ ಅಧ್ಯಕ್ಷೆ, ಕಾಂಗ್ರೆಸ್ ನಾಯಕಿ ಆಶಾ ಐಹೊಳೆ ಪತ್ರ ಬರೆದಿರುವ ವಿಚಾರ ಈಗ ಬೆಳಕಿಗೆ ಬಂದಿದೆ.
5 ದಿನಗಳಿಂದ ನಗರದಲ್ಲಿ ಬೀಡು ಬಿಟ್ಟಿರುವ ಉಡುಪಿ ಪೊಲೀಸರು ಬುಧವಾರ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಅವರನ್ನು ಭೇಟಿಯಾಗಿ ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್
Advertisement
Advertisement
ಪತ್ರದಲ್ಲಿ ಏನಿದೆ?
ಹಿಂಡಲಗಾ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಆಶಾ ಐಹೊಳೆ 2021ರ ಫೆಬ್ರವರಿ 15ರಂದು 108 ಕಾಮಗಾರಿಗಳ ಪಟ್ಟಿ ಸಮೇತ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ವರ್ಕ್ ಆರ್ಡರ್ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್ – ಆತ್ಮಹತ್ಯೆಗೆ ಕಾರಣ ಏನು?
Advertisement
Advertisement
ʼಅನುಮೋದನೆಗಾಗಿ ಆದೇಶಿಸಲಾಗಿದೆʼ ಎಂದು ಫೆಬ್ರವರಿ 26ರಂದು ಸಹಿ ಮಾಡಲಾಗಿದೆ. ಆದೇಶದ ಪ್ರತಿಗಳನ್ನು ಮಾರ್ಚ್ 5ರಂದು ನೀಡಲಾಗುವುದು’ ಎಂದು ಕೈಬರಹದಲ್ಲಿ ಬರೆದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆಯ ಕಾರ್ಯದರ್ಶಿ ಸಹಿ ಮತ್ತು ಸೀಲ್ ಹಾಕಲಾಗಿದೆ.