ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ (Santhosh Patil) ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.
ಈ ಪ್ರಕರಣದಲ್ಲಿ ಸಲ್ಲಿಸಿರುವ ಬಿ ರಿಪೋರ್ಟ್‍ನ ಸಂಪೂರ್ಣ ಸಾಕ್ಷ್ಯಗಳನ್ನು ನ್ಯಾಯಾಲಯದ ಸುಪರ್ದಿಗೆ ನೀಡುವಂತೆ 42ನೇ ವಿಶೇಷ ನ್ಯಾಯಾಲಯ ಆದೇಶಿಸಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಜನವರಿ 31ರೊಳಗೆ ಎಲ್ಲಾ ಸಾಕ್ಷ್ಯಗಳನ್ನು ಕೋರ್ಟ್‍ಗೆ ಸಲ್ಲಿಸಿ ಎಂದು ಸೂಚಿಸಿದೆ. ಇದನ್ನೂ ಓದಿ: ಸಂತೋಷ್ ಪಾಟೀಲ್ ಕೇಸ್‌ಗೆ ಟ್ವಿಸ್ಟ್ – 2021ರಲ್ಲಿ ಬೆಳಗಾವಿ ZP ಅಧ್ಯಕ್ಷೆ ಬರೆದ ಪತ್ರ ಔಟ್
Advertisement
Advertisement
ಈ ಹಿಂದೆ ಕುಟುಂಬಸ್ಥರು ಬಿ ರಿಪೋರ್ಟ್ ಪ್ರಶ್ನಿಸಿ, ಕೋರ್ಟ್ ಮೊರೆ ಹೋಗಿದ್ದರು. ಆ ಸಂದರ್ಭದಲ್ಲಿ ದಾಖಲಾತಿ ನೀಡಿದ್ದ ಉಡುಪಿ ಪೊಲೀಸರು (Udupi Police) ಸಂಪೂರ್ಣ ದಾಖಲಾತಿ ಸಲ್ಲಿಕೆಗೆ ಹಿಂದೇಟು ಹಾಕಿದ್ದರು. ಇದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ನ್ಯಾಯಾಲಯದ ಹೊಸ ಆದೇಶ ಮಾಡಿದೆ. ಇದನ್ನೂ ಓದಿ: ವರ್ಕ್ ಆರ್ಡರ್ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್ – ಆತ್ಮಹತ್ಯೆಗೆ ಕಾರಣ ಏನು?
Advertisement
Advertisement
ಕೆಲವೊಂದು ಸಾಕ್ಷ್ಯಗಳಲ್ಲಿ ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪ (KS Eshwarappa) ಪಿಎಗೆ ಹಣ ನೀಡಿರುವುದು ವಾಟ್ಸಪ್ ಚಾಟ್‍ನಲ್ಲಿ ಬಹಿರಂಗವಾಗಿದೆ. ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪ ಪಿಎ ಜೊತೆ ನಡೆಸಿರುವ ವಾಟ್ಸಪ್ ಚಾಟ್ (Whatsapp Chat) ಪ್ರತಿ ಕೂಡ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ಮೂಲಕ ಈಶ್ವರಪ್ಪಗೆ ಸಂತೋಷ್ ಆತ್ಮಹತ್ಯೆ ಪ್ರಕರಣ ಇನ್ನೂ ಸಂಕಷ್ಟ ತಂದಿಟ್ಟಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k