ಬೆಂಗಳೂರು: ಸಿಐಡಿ (CID) ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿ (Santro Ravi) ಆತ್ಮಹತ್ಯೆಗೆ ಯತ್ನಿಸಿದ್ದಾನಂತೆ. ಇದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ ಎಂದು ಬಿಜೆಪಿ (BJP) ಸರ್ಕಾರದ ವಿರುದ್ಧ ಕಾಂಗ್ರೆಸ್ (Congress) ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಸ್ಯಾಂಟ್ರೋ ರವಿಯೊಳಗೆ ಅಡಗಿದ್ದ ಬಿಜೆಪಿಗರ ಭಯಂಕರ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಸರ್ಕಾರ? ಸಿಐಡಿ ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನಂತೆ. ಇದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ? ಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ ಬೊಮ್ಮಾಯಿ (Basavaraj Bommai) ಅವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಇದನ್ನೂ ಓದಿ: ಐಸಿಯುನಲ್ಲಿ ಸ್ಯಾಂಟ್ರೋ ರವಿಗೆ ಚಿಕಿತ್ಸೆ- ಸಂಜೆ ಡಿಸ್ಚಾರ್ಜ್?
Advertisement
ಸ್ಯಾಂಟ್ರೋ ರವಿಯೊಳಗೆ ಅಡಗಿದ್ದ ಬಿಜೆಪಿಗರ ಭಯಂಕರ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಸರ್ಕಾರ?
ಸಿಐಡಿ ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನಂತೆ.
ಇದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ?
ಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ @BSBommai ಅವರೇ?
— Karnataka Congress (@INCKarnataka) January 27, 2023
Advertisement
ಪೊಲೀಸ್ ಕಸ್ಟಡಿಯಲ್ಲಿ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಸುದ್ದಿ ಬರುತ್ತಿದೆ. ಆರಗ ಜ್ಞಾನೇಂದ್ರ (Araga Jnanendra) ಅವರೇ, ಕಸ್ಟಡಿಯಲ್ಲಿರುವ ಆರೋಪಿಗೆ ರಕ್ಷಣೆ ನೀಡಲು ಸಾಧ್ಯವಾಗದಿರುವುದು ನಿಮ್ಮ ವೈಫಲ್ಯವೇ ಅಥವಾ ಷಡ್ಯಂತ್ರವೇ? ಆತನ ಜೊತೆಗಿರುವ ತಮ್ಮ ವ್ಯವಹಾರಗಳನ್ನು ಮುಚ್ಚಿಕೊಳ್ಳಲು ದಾರಿ ಹುಡುಕುತ್ತಿದ್ದೀರಾ ಎಂದು ಗಂಭೀರ ಆರೋಪ ಮಾಡಿದೆ.
Advertisement
ಪೊಲೀಸ್ ಕಸ್ಟಡಿಯಲ್ಲಿ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಸುದ್ದಿ ಬರುತ್ತಿದೆ.@JnanendraAraga ಅವರೇ,
ಕಸ್ಟಡಿಯಲ್ಲಿರುವ ಆರೋಪಿಗೆ ರಕ್ಷಣೆ ನೀಡಲು ಸಾಧ್ಯವಾಗದಿರುವುದು ನಿಮ್ಮ ವೈಫಲ್ಯವೇ ಅಥವಾ ಷಡ್ಯಂತ್ರವೇ?
ಆತನ ಜೊತೆಗಿರುವ ತಮ್ಮ ವ್ಯವಹಾರಗಳನ್ನು ಮುಚ್ಚಿಕೊಳ್ಳಲು ದಾರಿ ಹುಡುಕುತ್ತಿದ್ದೀರಾ?
— Karnataka Congress (@INCKarnataka) January 27, 2023
Advertisement
ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಟ್ರೋ ರವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಐಡಿ ಪೊಲೀಸ್ ಮೂಲಗಳು ತಿಳಿಸಿತ್ತು. ಶುಗರ್, ಬಿಪಿ ಸೇರಿ ಹಲವು ಸಮಸ್ಯೆಯಿಂದ ಬಳಲುತ್ತಿರುವ ಸ್ಯಾಂಟ್ರೋ ರವಿ, ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಯತ್ನಸಿದ್ನಾ ಎಂಬ ಅನುಮಾನ ಮೂಡಿದೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ವೇಶ್ಯಾವಾಟಿಕೆ, ವರ್ಗಾವಣೆ ದಂಧೆ, ಪತ್ನಿ ಮೇಲೆ ದೌರ್ಜನ್ಯ ಸೇರಿದಂತೆ ಹಲವು ಪ್ರಕರಣಗಳಡಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ಸ್ಯಾಂಟ್ರೋ ರವಿಯನ್ನು ಜನವರಿ 30ರ ವರೆಗೂ ಸಿಐಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k