ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸ್ಯಾಂಟ್ರೋ ರವಿ (Santro Ravi) ಗೆ ಸದ್ಯ ಐಸಿಯು (ICU) ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವ ಸ್ಯಾಂಟ್ರೋ ರವಿ ಶುಗರ್ ಲೋ ಆಗೋದಕ್ಕೆ ಮಾತ್ರೆಯನ್ನ ತೆಗೆದುಕೊಳ್ತಾರೆ. ಆದರೆ ಸ್ಯಾಂಟ್ರೋ ರವಿ ಏಕಕಾಲಕ್ಕೆ 10 ಮಾತ್ರೆ ತೆಗದುಕೊಂಡಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಇಂದು ಸಂಜೆ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.
ಸ್ಯಾಂಟ್ರೋ ರವಿ ಹೆಚ್ಚು ಮಾತ್ರೆ ನುಂಗಿದ್ದಾನೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂದು ವಿಕ್ಟೋರಿಯಾ (Victoria Hospital) ವೈದ್ಯಕೀಯ ಅಧಿಕ್ಷಕರಿಂದ ಅಧಿಕೃತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಏನಿದು ಘಟನೆ..?: ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ಗುರುವಾರ ಸಂಜೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಶುಗರ್ 400 ಕ್ಕೂ ಅಧಿಕವಾಗಿತ್ತು. ಈ ಹಿನ್ನೆಲೆ ವಿಕ್ಟೋರಿಯಾಗೆ ದಾಖಲಿಸಲಾಗಿತ್ತು.
ಶುಗರ್, ಬಿಪಿ ಸೇರಿ ಹಲವು ಸಮಸ್ಯೆಯಿಂದ ಬಳಲುತ್ತಿರುವ ಸ್ಯಾಂಟ್ರೋ ರವಿ, ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ನಾ ಎಂಬ ಅನುಮಾನ ಮೂಡಿದೆ. ಸ್ಯಾಂಟ್ರೋ ರವಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲು ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆ ಬಳಿ ಭದ್ರತೆ ಹೆಚ್ಚಿಸಿದ್ದಾರೆ. ಭದ್ರತೆಗೆ ಕೆಎಸ್ ಆರ್ ಪಿ ತುಕಡಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಸ್ಯಾಂಟ್ರೋ ರವಿಯನ್ನು ಜನವರಿ 30 ರವರೆಗೂ ಸಿಐಡಿ ಕಸ್ಟಡಿಗೆ ನ್ಯಾಯಾಲಯ ಅದೇಶ ಮಾಡಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k