ಸಾನ್ಯ ಅಯ್ಯರ್ ಮತ್ತಷ್ಟು ಬೋಲ್ಡ್: ಬದಲಾದ ಪುಟ್ಟಗೌರಿ

Public TV
1 Min Read
Sanya Iyer 1

ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಂತೆಯೇ ಕಿರುತೆರೆಯ ಪುಟ್ಟಗೌರಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದಾರೆ. ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಾನ್ಯಾ ಅಯ್ಯರ್ (Sanya Iyer), ಇದೀಗ ಮತ್ತೊಂದು ಫೋಟೋ ಶೂಟ್ (Photoshoot) ನಲ್ಲಿ ಭಾಗಿಯಾಗಿದ್ದು,  ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Sanya Iyer 3

ಬ್ಲೌಸ್ ಇಲ್ಲದೇ ಕೇವಲ ಸೀರೆ ಉಟ್ಟುಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿರುವ ಸಾನ್ಯಾ ಅಯ್ಯರ್. ಆ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಯಾಕ್ ಲೆಸ್ ಪೋಸ್ ಕೂಡ ನೀಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿವೆ. ಕೆಲವರು ಪಾಸಿಟಿವ್ ಕಾಮೆಂಟ್ ಮಾಡಿದರೆ, ಇನ್ನೂ ಕೆಲವರು ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ.

Sanya Iyer 2

ಈ ಹಿಂದೆಯೂ ಸಾನ್ಯಾ ಬಿಕಿನಿ ಫೋಟೋಶೂಟ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಈಗ ಹೊಸ ಲುಕ್‌ನಲ್ಲಿ ಸ್ಟೈಲೀಶ್ ಗೆಟಪ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಬ್ಲೌಸ್ ಇಲ್ಲದೇ ಸೀರೆ ತೊಟ್ಟಿದ್ದಾರೆ.  ಇದನ್ನೂ ಓದಿ:‘ಫ್ಲರ್ಟ್’ ಮಾಡಲು ರೆಡಿಯಾದ ನಟ ಚಂದನ್

Sanya Iyer 4

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ(Bigg Boss Kannada) ಸಾನ್ಯ ಅಯ್ಯರ್ ಸ್ಪಧಿಯಾಗಿ ಭಾಗವಹಿಸಿದ್ದರು. ರೂಪೇಶ್ ಶೆಟ್ಟಿ ಜೊತೆಗಿನ ಸಾನ್ಯ ಸ್ನೇಹ ಹೈಲೆಟ್ ಆಗಿತ್ತು. ಈ ಸೀಸನ್‌ನಲ್ಲಿ ರೂಪೇಶ್ ಶೆಟ್ಟಿ (Roopesh Shetty) ವಿನ್ನರ್  ಆಗಿದ್ದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article