Connect with us

ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ ಶಾ ಇನ್ನಿಲ್ಲ

ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ ಶಾ ಇನ್ನಿಲ್ಲ

ಬೆಂಗಳೂರು: ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಶಾ(84) ಅವರು ಮಂಗಳವಾರ ಮಧ್ಯಾಹ್ನ 2:15ಕ್ಕೆ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶೇಷಾದ್ರಿಪುರದ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

1966ರಲ್ಲಿ ಪುಟ್ಟದಾಗಿ ಸುರೇಶ್ ಸಿ. ಷಾ ಸಪ್ನಾ ಬುಕ್ ಹೌಸ್ ಆರಂಭಿಸಿದ್ದರು. ನಂತರ 19 ಶಾಖೆಗಳನ್ನು ತೆರೆಯುವ ಮೂಲಕ ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದು ಪ್ರಸಿದ್ಧಿ ಪಡೆದಿರುವುದರ ಹಿಂದೆ ಸುರೇಶ್ ಅವರ ಕೆಲಸವನ್ನು ಮರೆಯುವಂತಿಲ್ಲ.

ಸುರೇಶ್ ಸಿ ಶಾ ಅವರು ಮೂವರು ಪುತ್ರರಾದ ನಿತಿನ್ ಶಾ, ದೀಪಕ್ ಶಾ ಮತ್ತು ಪರೇಶ್ ಶಾ ಅವರನ್ನು ಅಗಲಿದ್ದಾರೆ. ಬುಧವಾರ ಬೆಳಗ್ಗೆ ಹರಿಶ್ಚಂದ್ರ ಘಾಟ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಸಪ್ನಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement