Connect with us

Bengaluru City

ಕನ್ನಡದ ‘ಸರಳ ವಿರಳ’ಕ್ಕೆ ಅತ್ಯುತ್ತಮ ಶೈಕ್ಷಣಿಕ ಚಲನಚಿತ್ರ ಪ್ರಶಸ್ತಿ

Published

on

ನವದೆಹಲಿ: ಕನ್ನಡದ ‘ಸರಳ ವಿರಳ’ ಚಲನಚಿತ್ರ ಅತ್ಯುತ್ತಮ ಶೈಕ್ಷಣಿಕ ಚಲನಚಿತ್ರವಾಗಿ ಆಯ್ಕೆಯಾಗಿದೆ. ದೆಹಲಿಯಲ್ಲಿ ನಡೆದ 66ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮೊದಲ ಸ್ಥಾನ ಪಡೆದು ಪ್ರಶಸ್ತಿ ಬಾಚಿಕೊಂಡಿದೆ.

ಸೋಮವಾರ ನಗರದ ವಿಜ್ಞಾನ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಚಿತ್ರ ನಿರ್ಮಾಣಕ್ಕಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ನಿರ್ದೇಶಕರಾದ ಎನ್.ಆರ್.ವಿಶುಕುಮಾರ್ ಪತ್ನಿ ಹೆಚ್.ಆರ್.ಸುಜಾತಾ ಅವರು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ, ಪರಿಸರ ಹಾಗೂ ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವರಾದ ಪ್ರಕಾಶ್ ಜಾವ್ಡೇಕರ್ ಹಾಗೂ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರಶಸ್ತಿಯು 50 ಸಾವಿರ ರೂ.ನಗದು ಹಾಗೂ ರಜತ ಕಮಲ ಪ್ರಶಸ್ತಿ ಫಲಕ ಒಳಗೊಂಡಿದೆ.