– ಭ್ರಷ್ಟಾಚಾರ ವಿರುದ್ಧ ಜಾಗೃತಿ ಕಾರ್ಯಕ್ರಮ
ಶಿವಮೊಗ್ಗ: ಎಲ್ಲ ಸರ್ಕಾರಿ ಅಧಿಕಾರಿಗಳು, ನೌಕರರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಸಾರ್ವಜನಿಕ ಸೇವೆಯನ್ನು ನೀಡಿದರೆ ಭ್ರಷ್ಟಾಚಾರಕ್ಕೆ ಅವಕಾಶವೇ ಇರುವುದಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ.ಕೆ.ಎನ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಭ್ರಷ್ಟಾಚಾರ ನಿಗ್ರಹ ದಳ ಹಾಗೂ ಲೋಕಾಯುಕ್ತ ಪೊಲೀಸ್ ಠಾಣೆ, ಜಿಲ್ಲಾ ನ್ಯಾಯವಾದಿಗಳ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್‍ನ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಮೂಡಿಸುವ ಅರಿವು ಸಪ್ತಾಹದ ಅಂಗವಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸರಸ್ವತಿ ಅವರು ಮಾತನಾಡಿದರು.
Advertisement
ಇಂದು ನಾವೆಲ್ಲ ಯಾವುದೇ ರೀತಿಯಲ್ಲಿ ಭ್ರಷ್ಟಾಚಾರದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪ್ರತಿಜ್ಞೆ ಸ್ವೀಕರಿಸಿದ್ದೇವೆ. ಈ ಪ್ರತಿಜ್ಞೆಯಲ್ಲಿ ಭ್ರಷ್ಟಾಚಾರ ವಿರುದ್ಧವಾದ ಆರು ಸಮಗ್ರ ಅಂಶಗಳಿದ್ದು, ಇದನ್ನು ಎಲ್ಲರೂ ಅಕ್ಷರಶಃ ಅಳವಡಿಸಿಕೊಂಡಲ್ಲಿ ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳ ಜವಾಬ್ದಾರಿ ಕಡಿಮೆ ಆಗುತ್ತದೆ. ನೆಮ್ಮದಿಯ ವಾತಾವರಣ ಮೂಡುತ್ತದೆ ಎಂದರು. ಇದನ್ನೂ ಓದಿ: ಪುನೀತ್ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಅಭಿಮಾನಿ ಸಾವು
Advertisement
ಭ್ರಷ್ಟಾಚಾರ ಒಂದು ಸಾಮಾಜಿಕ ಪಿಡುಗು. ಇದರಿಂದ ಜನಸಾಮಾನ್ಯರು ಸರ್ಕಾರಿ ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಳ್ಳುವಂತಾಗಿದೆ. ಆದ್ದರಿಂದ ಎಲ್ಲ ಸಾರ್ವಜನಿಕ ನೌಕರರು ತಮ್ಮ ಜವಾಬ್ದಾರಿಗಳನ್ನು ಅರಿತು ಆತ್ಮಸಾಕ್ಷಿಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ, ಯೋಜನೆಗಳನ್ನು ತಲುಪಿಸಬೇಕು ಎಂದು ತಿಳಿಸಿದರು.
Advertisement
ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜನ ಸಾಮಾನ್ಯರಿಗೆ ಉಚಿತವಾಗಿ ಕಾನೂನಿನ ಅರಿವು ಮತ್ತು ನೆರವನ್ನು ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಹಲವಾರು ಜನಪರ ಕಾರ್ಯಕ್ರಮಗಳು ನಡೆಯುತ್ತಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿ, ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
Advertisement
ಈ ಕಾರ್ಯಕ್ರಮದಲ್ಲಿ ಜಿ.ಪಂ.ಸಿಇಒ ಎಂ.ಎಲ್.ವೈಶಾಲಿ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ್, ಸಿಪಿಓ ಉಮಾ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ಅಪ್ಪು ಅವರ ಸಾವು ನಿಜ ಅಂತ ಅನಿಸುತ್ತಿಲ್ಲ: ಅದಿತಿ ಪ್ರಭುದೇವ