ಮುಂಬೈ: ಅನುಮಾನಾಸ್ಪದ ರೀತಿಯಲ್ಲಿ ರಸ್ತೆ ಬದಿ ಗೋಣಿ ಚೀಲದಲ್ಲಿ ಮಹಿಳೆಯ ಅರೆಬೆತ್ತಲೆ ಶವ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಸ್ಥಳೀಯ ಗ್ರಾಮ ಪಂಚಾಯಿತಿಯ ಸರಪಂಚ್ ಎಂದು ಗುರುತಿಸಲಾಗಿದ್ದು, ಈ ಘಟನೆ ಮಹಾಡ್ ತಾಲೂಕಿನ ಬೆಳೋಶಿ ಗ್ರಾಮದಲ್ಲಿ ನಡೆದಿದೆ. ರಸ್ತೆಬದಿ ಎಸೆದಿದ್ದ ಗೋಣಿಚೀಲ ಗಮನಿಸಿದ ಕೆಲ ಯುವಕರು ಪರಿಶೀಲಿಸಲು ಮುಂದಾದಾಗ ಮಹಿಳೆ ಬೆತ್ತಲೆಯಾಗಿದ್ದು, ಆಕೆಯ ದೇಹದ ಮೇಲೆ ಗಾಯದ ಗುರುತುಗಳನ್ನು ಕಂಡು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಬದಲಾವಣೆ ಕೇವಲ ಊಹಾಪೋಹ: ನಳಿನ್ ಕುಮಾರ್ ಕಟೀಲ್
Advertisement
Advertisement
ನಂತರ ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮಹಿಳೆಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದೀಗ ಪೊಲೀಸರು ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಮೃತ ಮಹಿಳೆಯ ಸಂಬಂಧಿಕರ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಲ್ಯಾಂಡಿಂಗ್ ಸಮಸ್ಯೆಯಾದ ಸಿಎಂ ಬೊಮ್ಮಾಯಿ ಇದ್ದ ವಿಮಾನ
Advertisement
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ತಿಳಿಸಿದ್ದಾರೆ.