ಯಾದಗಿರಿ: ನಗರದಲ್ಲಿ ಮತ್ತೆ ಸ್ಯಾಟಲೈಟ್ ಪೋನ್ (Satellite Phone) ಸದ್ದು ಮಾಡಿದೆ. ಯಾದಗಿರಿ ಜಿಲ್ಲೆಯ ಸುರಪುರ (Surapura) ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟಲೈಟ್ ಫೋನ್ ಮೂಲಕ ಪಾಕಿಸ್ತಾನಕ್ಕೆ (Pakistan) ಕರೆ ಹೋಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಸೆಪ್ಟೆಂಬರ್ 17 ರಂದು ಶೆಳ್ಳಗಿ ಗ್ರಾಮದ ಕೃಷಿ ಪ್ರದೇಶವೊಂದರಿಂದ ನಸುಕಿನ ಜಾವ 3 ಗಂಟೆ ಸುಮಾರಿಗೆ ಕರೆ ಹೋಗಿದೆ. ಸೆಪ್ಟೆಂಬರ್ 17 ರಂದು ಪಾಕ್‌ಗೆ ಕರೆ ಹೋಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ದಿನದಂದೇ ಸ್ಯಾಟಲೈಟ್ ಪೋನ್ ಕರೆ ಹೋಗಿದ್ದು, ಚೀನಾ ನಿರ್ಮಿತ ಸ್ಯಾಟಲೈಟ್ ಪೋನ್‌ನಿಂದ ಕರೆ ಮಾಡಲಾಗಿದೆ. ಸೆಪ್ಟೆಂಬರ್ 19 ರಂದು ಈ ಬಗ್ಗೆ ಕೇಂದ್ರಕ್ಕೆ ಮಾಹಿತಿ ಸಿಕ್ಕಿದ್ದು, ಜಿಪಿಎಸ್ ಲೊಕೇಶನ್ ಆಧಾರದ ಮೇಲೆ ಕೇಂದ್ರ ಸಂಸ್ಥೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
2 ವರ್ಷದ ಹಿಂದೆ ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದ ಹೊರವಲಯದಿಂದ ಪಾಕಿಸ್ತಾನಕ್ಕೆ ಸ್ಯಾಟಲೈಟ್ ಕರೆ ಹೋಗಿತ್ತು. 2021 ಏಪ್ರಿಲ್ ತಿಂಗಳಲ್ಲಿ ಹೆಡಗಿಮದ್ರಾದಿಂದ ಪಾಕ್‌ಗೆ ಸ್ಯಾಟಲೈಟ್ ಕರೆ ಮಾಡಲಾಗಿತ್ತು. ಅದೇ ರೀತಿ 2014 ರಲ್ಲಿ ಮೊಸ್ಟ್ ವಾಂಟೆಡ್ ಉಗ್ರರು ಯಾದಗಿರಿಯಲ್ಲಿ ಅಡಗಿದ್ದರು. 2014 ರಲ್ಲಿ ಮುಂಬೈ ಹಾಗೂ ಹೈದರಾಬಾದ್‌ನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಾದಗಿರಿಗೆ ಭೇಟಿ ನೀಡಿದ್ದರು. ಇದನ್ನೂ ಓದಿ: ಹೊಸ ವರ್ಷಾಚರಣೆ – ಬ್ರಿಗೇಡ್ ರಸ್ತೆಯಲ್ಲಿ ಜೋಡಿಗಳಿಗೆ ಪ್ರತ್ಯೇಕ ಮಾರ್ಗ
Advertisement
Advertisement
ಮಧ್ಯಪ್ರದೇಶ ಖಂಡ್ವಾ ಜೈಲಿನಿಂದ ತಪ್ಪಿಸಿಕೊಂಡಿದ್ದ ಸಿಮಿ ಉಗ್ರ ಮಹಿಬೂಬ ಗುಡ್ಡು ಸೇರಿದಂತೆ ಕೆಲವರು ಯಾದಗಿರಿಯಲ್ಲಿ ಅಡಗಿದ್ದರು. ಈಗ ಯಾದಗಿರಿಯಿಂದ ಮತ್ತೆ ಪಾಕಿಸ್ತಾನಕ್ಕೆ ಸ್ಯಾಟಲೈಟ್ ಕರೆ ಹೋಗಿರುವ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಸಂಸತ್ ಸ್ಮೋಕ್ ಬಾಂಬ್ ಕೇಸ್ – ಟಿಎಂಸಿ ಶಾಸಕನ ಜೊತೆ ಆರೋಪಿ – ಫೋಟೋ ಹರಿಬಿಟ್ಟ ಬಿಜೆಪಿ