Bengaluru CityCinemaKarnatakaLatestMain PostSandalwoodTV Shows

ಹಸೆಮಣೆ ಏರಲು ಸಜ್ಜಾದ `ಸತ್ಯ’ ಧಾರಾವಾಹಿ ಹೀರೋ ಸಾಗರ್

ಕಿರುತೆರೆಯ ನಂಬರ್ ಒನ್ `ಸತ್ಯ’ (Sathya Serial) ಸೀರಿಯಲ್ ಹೀರೋ ತಮ್ಮ ಫೀಮೇಲ್ ಫ್ಯಾನ್ಸ್‌ಗೆ ಹಾರ್ಟ್ ಬ್ರೇಕಿಂಗ್ ಸುದ್ದಿಯೊಂದನ್ನ ಕೊಟ್ಟಿದ್ದಾರೆ. ʻಸತ್ಯʼ ಧಾರಾವಾಹಿಯ ಅಮುಲ್ ಬೇಬಿಯಾಗಿ ಮಿಂಚ್ತಿರುವ ಸಾಗರ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಸತ್ಯ ಧಾರಾವಾಹಿಯಲ್ಲಿ ಕಾರ್ತಿಕ್ ಪಾತ್ರಧಾರಿಯಾಗಿ ಅಪಾರ ಅಭಿಮಾನಿಗಳ ಮನಗೆದ್ದ ನಟ ಸಾಗರ್ ಗೌಡ(Sagar Gowda) ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಮುಲ್ ಬೇಬಿ ಎಂದೇ ಫೇಮಸ್ ಆಗಿದ್ದ ನಟ ಇದೀಗ ನಟಿ, ಕಮ್ ಮಾಡೆಲ್ ಸಿರಿ ರಾಜು(Siri Raju) ಅವರನ್ನು ಪ್ರೀತಿಸಿ ಮದುವೆಯಾಗುತ್ತಿದ್ದಾರೆ.ಸದ್ಯದಲ್ಲೇ ಬೆಂಗಳೂರಿನಲ್ಲಿ ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದು, ಮುಂದಿನ ವರ್ಷ ಹಸೆಮಣೆ ಏರಲಿದ್ದಾರೆ.

 

View this post on Instagram

 

A post shared by Siri 🧿 (@sirri_raju)

ಸಾಕಷ್ಟು ಸಮಯದಿಂದ ಸಾಗರ್ ಮತ್ತು ಸಿರಿ ರಾಜು ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಇದೀಗ ಸೂಕ್ತ ಸಮಯ ಎಂದೇನಿಸಿ ರೊಮ್ಯಾಂಟಿಕ್ ಶೇರ್ ಮಾಡುವ ಮೂಲಕ ತಾವು ದಾಂಪತ್ಯ ಜೀವನಕ್ಕೆ ಕಾಲಿಡುವ ಸುದ್ದಿಯನ್ನ ತಿಳಿಸಿದ್ದಾರೆ. ಚೆಂದದ ಜೋಡಿಯ ಫೋಟೋ ನೋಡಿ, ಕಲಾವಿದರು, ಆಪ್ತರು, ಅಭಿಮಾನಿಗಳು ಶುಭಹಾರೈಸಿದ್ದಾರೆ. ಇದನ್ನೂ ಓದಿ:ದೊಡ್ಮನೆ ರಣರಂಗ: ರೂಪೇಶ್ ಶೆಟ್ಟಿ ಶರ್ಟ್ ಕಿತ್ತೆಸೆದ ಪ್ರಶಾಂತ್ ಸಂಬರ್ಗಿ

 

View this post on Instagram

 

A post shared by Siri 🧿 (@sirri_raju)

ಇನ್ನೂ ಸಿರಿ ರಾಜು ಕೂಡ ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಮಾಡೆಲ್ ಆಗಿಯೂ ಗುರುತಿಸಿಕೊಂಡಿದ್ದಾರೆ. ಸದ್ಯ ವಿಜಯ್ ರಾಘವೇಂದ್ರ ಅಭಿನಯದ ಹೊಸ ಚಿತ್ರದಲ್ಲಿ ಸಿರಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾಗರ್ ಮತ್ತು ಸಿರಿ, ಈ ತಾರಾ ಜೋಡಿ ಹಸೆಮಣೆ ಏರುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

Live Tv

Back to top button