ಮೈಸೂರು: `ಮುಂದಿನ ಸಿಎಂ ಸತೀಶ್ ಜಾರಕಿಹೊಳಿ’ ಎಂಬ ಕೂಗು ಎದ್ದಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ದಿಢೀರ್ ಮೈಸೂರಿಗೆ ಆಗಮಿಸಿದ್ದು, ಸಿಎಂ ಆಪ್ತ ಸಚಿವ (CM Personal Secretary) ಡಾ.ಹೆಚ್.ಸಿ ಮಹದೇವಪ್ಪ (HC Mahadevappa) ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ರಾಜ್ಯ ರಾಜಕಾರಣದಲ್ಲಿ ಕೂತುಹಲ ಮೂಡಿಸಿದೆ.
ಇತ್ತೀಚಿಗಷ್ಟೇ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಅವರನ್ನು ಸತೀಶ್ ಜಾರಕಿಹೊಳಿ ಭೇಟಿ ಮಾಡಿದ್ದರು. ದೆಹಲಿ (Delhi) ಭೇಟಿ ನಂತರ ರಾಜ್ಯ ನಾಯಕರುಗಳನ್ನು ಭೇಟಿ ಮಾಡಲಿದ್ದು, ಇಂದು (ಅ.8) ಮೈಸೂರಿನಲ್ಲಿ ಮಹದೇವಪ್ಪ, ಶಾಸಕ ಹರೀಶ್ ಗೌಡ ಸೇರಿ ಹಲವು ಶಾಸಕರ ಭೇಟಿಗೆ ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ. ದಿಢೀರ್ ಮೈಸೂರಿಗೆ (Mysuru) ಆಗಮಿಸಿ ಭೇಟಿಯಾಗುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಸಿಎಂ ತವರು ಜಿಲ್ಲೆಯ ಶಾಸಕರನ್ನು ಸತೀಶ್ ಜಾರಕಿಹೊಳಿ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎನ್ನುವುದನ್ನು ಈ ಭೇಟಿ ಎತ್ತಿಹಿಡಿಯುತ್ತದೆ. ಇಂದು ಪೂರ್ತಿ ದಿನ ಯಾವುದೇ ಅಧಿಕೃತ ಕಾರ್ಯಕ್ರಮ ಇಲ್ಲದೆ ನಾಯಕರ ಭೇಟಿಗೆ ಸಮಯವನ್ನು ಮೀಸಲಿಟ್ಟಿದ್ದಾರೆ.
Advertisement
Advertisement
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 5 ವರ್ಷ ಇರುತ್ತಾರೋ, 3 ವರ್ಷವೋ ಇರುತ್ತಾರೋ ಅದು ನನಗೆ ಗೊತ್ತಿಲ್ಲ. ನೀವು ಅದನ್ನ ಹೈ ಕಮಾಂಡ್‌ಗೆ ಕೇಳಬೇಕು. ಆದರೆ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ಇದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆಯಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಆ ರೀತಿಯ ಯಾವುದೇ ಚರ್ಚೆಗಳೂ ನಡೆದಿಲ್ಲ. ವಿಪಕ್ಷಗಳು, ಮಾಧ್ಯಮಗಳು, ಚರ್ಚೆ ಮಾಡುತ್ತಿವೆ. ವಿಪಕ್ಷ ನಾಯಕರು ಪ್ರೀತಿಯಿಂದ ನಮ್ಮ ಹೆಸರು ಹೇಳುತ್ತಿದ್ದಾರೆ ಅಷ್ಟೇ. ಆದರೆ ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ನಾನು ಈ ವಿಚಾರವನ್ನು ಹಲವು ಬಾರಿ ಸ್ಪಷ್ಟ ಪಡಿಸಿದ್ದೇನೆ. ಅವರ ಬೆಂಬಲಿಗರು ಅವರ ನಾಯಕರಿಗೆ ಮುಂದಿನ ಸಿಎಂ ಎಂದು ಜೈಕಾರ ಹಾಕುವುದು ಸರ್ವೇ ಸಾಮಾನ್ಯ. ಅದನ್ನು ಇಟ್ಟುಕೊಂಡು ಏನೋ ಬದಲಾವಣೆ ಆಗುತ್ತದೆ ಎನ್ನುವುದು ಸರಿಯಲ್ಲ ಎಂದು ಹೇಳಿದರು.ಇದನ್ನೂ ಓದಿ: Haryana Results| ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸ್ಪರ್ಧಿ: ಕೈ ಸಂಸದೆ ಸೆಲ್ಜಾ
Advertisement
ಡಿಕೆಶಿ ವಿಚಾರ, ಮತ್ತೊಬ್ಬರ ವಿಚಾರ ನನಗೆ ಹೇಳಲು ಆಗುವುದಿಲ್ಲ. ರಾಜಕಾರಣಿಗಳು ಸೇರಿದಾಗ ರಾಜಕಾರಣದ ಬಗ್ಗೆ ಚರ್ಚೆ ಮಾಡುತ್ತೇವೆ. ಅದರಲ್ಲಿ ವಿಶೇಷವೇನೂ ಇಲ್ಲ. ಇವತ್ತಿನ ಮೈಸೂರು ಭೇಟಿಯಲ್ಲಿ ಮಹತ್ತರ ವಿಚಾರವಿಲ್ಲ. ಇಡೀ ದಿನ ಮೈಸೂರಲ್ಲಿ ಓಡಾಡಿಕೊಂಡು ದಸರಾ ನೋಡುತ್ತೇನೆ ಅಷ್ಟೇ ಎಂದು ತಿಳಿಸಿದರು.
Advertisement
ವಿಜಯೇಂದ್ರ ಹಾಗೂ ಸತೀಶ್ ಜಾರಕಿಹೊಳಿ ಭೇಟಿ:
ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅವರ ಸರ್ಕಾರಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಶಿಕಾರಿಪುರದಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಕುಟ್ರಳ್ಳಿ ಟೋಲ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು. ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ, ನಮ್ಮ ಕ್ಷೇತ್ರದ ಮುಖಂಡರೊಂದಿಗೆ ಸಚಿವರನ್ನು ಭೇಟಿ ಮಾಡಿದ್ದೇವೆ. ನಮ್ಮ ಜಿಲ್ಲೆಯಲ್ಲಿ ಎರಡು ಹೈವೇ ಟೋಲ್‌ಗಳು ಬಂದಿವೆ. ಇದರಿಂದ ಮೂರು ಜಿಲ್ಲೆಗಳ ಜನರಿಗೆ ಸಮಸ್ಯೆ, ಬಡವರಿಗೆ ತೊಂದರೆ ಆಗುತ್ತಿದೆ. ಟೋಲ್ ಸ್ಥಳಾಂತರ ಮಾಡುವಂತೆ ಒತ್ತಾಯಿಸಿದ್ದೇವೆ. ಸಚಿವರು ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ ಎಂದಿದ್ದಾರೆ ಎಂದು ತಿಳಿಸಿದ್ದರು.
ಸದ್ಯ ಇಂದು ಸತೀಶ್ ಜಾರಕಿಹೊಳಿ ಅವರು ಸಿಎಂ ಆಪ್ತ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರನ್ನು ದಿಢೀರ್ ಭೇಟಿ ನೀಡುತ್ತಿರುವುದು ಕುತೂಹಲವನ್ನುಂಟುಮಾಡಿದೆ.ಇದನ್ನೂ ಓದಿ: Haryana Result | ಬಿಜೆಪಿಗೆ ಹ್ಯಾಟ್ರಿಕ್ ಗೆಲುವು ಖಚಿತ – ಸಿಎಂ ನಯಾಬ್ ಸಿಂಗ್ ಸೈನಿ ವಿಶ್ವಾಸ