– ದಲಿತ ಸಿಎಂ ಚರ್ಚೆ ಮತ್ತೆ ಮುನ್ನೆಲೆಗೆ
ನವದೆಹಲಿ: ಮೂಡಾ ಪ್ರಕರಣದಲ್ಲಿ (MUDA Scam) ಸಿಎಂ ರಾಜೀನಾಮೆಗೆ (CM Siddaramaiah) ಒತ್ತಾಯ ವ್ಯಕ್ತವಾಗುತ್ತಿರುವ ಹೊತ್ತಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakholi) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಲಿತ ಸಚಿವರೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಜಾರಕಿಹೊಳಿ ಹಾಗೂ ಖರ್ಗೆಯವರ ಭೇಟಿ ಮಹತ್ವ ಪಡೆದುಕೊಂಡಿದೆ.
ದೆಹಲಿಯಲ್ಲಿ (Delhi) ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಭೇಟಿಯಾಗಿರುವ ಸತೀಶ್ ಜಾರಕಿಹೊಳಿ, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮೂಡಾ ಪ್ರಕರಣದಲ್ಲಿ ನಾವು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ. ಪ್ರತಿ ಹಂತದಲ್ಲೂ ನಾವು ಸಮರ್ಥಿಸಿಕೊಳ್ಳುತ್ತಿದ್ದೇವೆ ಎಂದಿದ್ದಾರೆ.ಇದನ್ನೂ ಓದಿ: ಪುಣೆಯಲ್ಲಿ 21ರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಒಂದು ವೇಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಎದುರಾದರೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ನಾಯಕರಿಗೆ ಸಿಎಂ ಸ್ಥಾನ ಸಿಗಬೇಕು. ಇದಕ್ಕೆ ನಾವೆಲ್ಲ ಒಗ್ಗಟ್ಟಾಗಿ ನಿಂತು ಸಿಎಂ ಸ್ಥಾನವನ್ನು ಸಮುದಾಯಕ್ಕೆ ಪಡೆಯಬೇಕು ಎನ್ನುವ ನಿಟ್ಟಿನಲ್ಲಿ ಖರ್ಗೆ ಅವರ ಜೊತೆಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಇದಕ್ಕೂ ಮುನ್ನ ಎರಡು ದಿನಗಳ ಹಿಂದೆ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಗೃಹ ಸಚಿವ ಪರಮೇಶ್ವರ್ ಜೊತೆಗೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ ನಡೆಸಿದ್ದರು. ಈ ಸಭೆಯಲ್ಲೂ ಮುಂದಿನ ರಾಜಕೀಯ ಬೆಳವಣಿಗೆ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸನ್ನಿವೇಶ ಒದಗಿ ಬಂದರೆ ಮುಂದಿನ ನಿಲುವುಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶೀಘ್ರದಲ್ಲೇ ದರ ಏರಿಕೆ ಶಾಕ್!