– ಸರ್ಕಾರದಿಂದ ಟಿಪ್ಪು ಜಯಂತಿ ಮಾಡುವ ತೀರ್ಮಾನ ಆಗಿಲ್ಲ ಎಂದ
ಬೆಳಗಾವಿ: ಬೆಳಗಾವಿ (Belagavi) ಜಿಲ್ಲೆ ವಿಭಜನೆಗೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದೇವೆ. ಗೋಕಾಕ್ ಹಾಗೂ ಚಿಕ್ಕೋಡಿ ಜಿಲ್ಲೆ ಆಗಬೇಕೆಂದು ಒತ್ತಾಯಿಸಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ತಿಳಿಸಿದ್ದಾರೆ.
ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಪರಿಷತ್ ಸದಸ್ಯರ ಸಭೆ ಕರೆಯಲಿದ್ದಾರೆ. ಎಲ್ಲರ ಅಭಿಪ್ರಾಯ ಪಡೆದ ಬಳಿಕ ಅಂತಿಮ ತೀರ್ಮಾನ ಮಾಡುವ ಭರವಸೆ ನೀಡಿದ್ದಾರೆ. ಶಾಸಕರ ಸಭೆ ಕರೆದಿದ್ದು ಇದೇ ಮೊದಲು. ಅಧಿವೇಶನದಲ್ಲಿ ಶಾಸಕರ ಸಭೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ ಆಚರಣೆ ಕೂಗು – ‘ಕೈ’ ಶಾಸಕ ಪ್ರಸ್ತಾಪ

ಅಥಣಿ-ಬೈಲಹೊಂಗಲ ಆಗೋದು ಕಷ್ಟ
ಅಥಣಿ ಹಾಗೂ ಬೈಲಹೊಂಗಲ ಜಿಲ್ಲೆ ಆಗುವುದಕ್ಕೂ ಬೇಡಿಕೆಯಿದೆ. ಆದ್ರೆ ಅದು ಕಷ್ಟದ ಕೆಲಸ. ಈ ಹಿಂದೆ ಗೋಕಾಕ್ ಹಾಗೂ ಚಿಕ್ಕೋಡಿ ಜಿಲ್ಲೆ ಆಗಬೇಕು ಎಂದು ಶಿಫಾರಸು ಮಾಡಲಾಗಿದೆ. ಆದಷ್ಟು ಬೇಗ ಜಿಲ್ಲೆ ವಿಭಜನೆ ಆಗುವುದು ಒಳ್ಳೆಯದು ಎಂದಿದ್ದಾರೆ.
ಇನ್ನೂ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಪ್ರತಿಭಟನೆ ಮಾಡಿದರೇ ಒಳ್ಳೆಯದು. ಆದ್ರೆ ರೈತರ ಪರ ಮಾಡಲಿ ರಾಜಕೀಯ ಮಿಶ್ರಣ ಬೇಡ. ನ್ಯಾಯ ಸಮ್ಮತವಾದ ಪ್ರತಿಭಟನೆ ಮಾಡಿದ್ರೆ, ಅದಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಕೇಂದ್ರ ಸರ್ಕಾರದ ಪಾತ್ರ ಬಹಳ ಇದೆ ಬಿಜೆಪಿ ಅವರು ಕೂಡ ಇದರ ಜವಾಬ್ದಾರಿ ತೆಗೆದುಕೊಳ್ಳಬೇಕು. ಇದನ್ನೂ ಓದಿ: ಮೋದಿ ಪ್ರಧಾನಿಯಾಗಿದ್ದಷ್ಟು ವರ್ಷ ನೆಹರು ದೇಶಕ್ಕಾಗಿ ಜೈಲಿನಲ್ಲಿದ್ದರು: ಪ್ರಿಯಾಂಕಾ ಗಾಂಧಿ ಕಿಡಿ
ಇನ್ನೂ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆಗೆ ಮತ್ತೆ ಒತ್ತಾಯ ವಿಚಾರಕ್ಕೆ ಮಾತನಾಡಿ, ಖಾಸಗಿಯಾಗಿ ಮಾಡಿದರೇ ಅವರ ಹಕ್ಕು ಅದು. ಸರ್ಕಾರದಿಂದ ಮಾಡುವ ಯಾವುದೇ ತೀರ್ಮಾನ ಆಗಿಲ್ಲ ಎಂದರು. ಇದನ್ನೂ ಓದಿ: ಡಿ.9ರಂದು ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ವಿಶ್ವದಲ್ಲೇ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಪ್ರದರ್ಶನ

