ಕೊಪ್ಪಳ: ಮೀಸಲಾತಿಯೊಂದರಿಂದಲೇ ನಾಯಕ ಸಮಾಜ (Nayak Community) ಅಭಿವೃದ್ಧಿ ಸಾಧ್ಯವಿಲ್ಲ. ಅಂಬೇಡ್ಕರ್ ಶೋಷಿತ ವರ್ಗಕ್ಕೆ ನೀಡಿದ ಶಿಕ್ಷಣ, ಸಂಘಟನೆ, ಹೋರಾಟದಂತಹ 3 ಮಂತ್ರಗಳನ್ನ ಪಾಲಿಸಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಅಭಿಪ್ರಾಯಪಟ್ಟಿದ್ದಾರೆ.
ಕೊಪ್ಪಳದ (Koppal) ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ನೂತನ ಸಂಘದ ಉದ್ಘಾಟನೆ ಹಾಗೂ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಆಂತರಿಕ ವಿಚಾರಗಳನ್ನ ಹೊರಗಡೆ ಹೇಳಬೇಡಿ ಅಂತ ಡಿಕೆಶಿ ಹೇಳಿದ್ದಾರೆ: ಸತೀಶ್ ಜಾರಕಿಹೊಳಿ
Advertisement
Advertisement
ಸಂವಿಧಾನ ನಮ್ಮ ಬದುಕಿಗೆ ಉಸಿರಾಟವಿದ್ದಂತೆ, ಅದನ್ನು ಉಳಿಸಿಕೊಂಡರೆ ಮಾತ್ರ ನಮಗೆ ಬದುಕು. ಇಲ್ಲವಾದರೆ ಬದುಕು ಬಹಳ ಕಠಿಣ. ಈ ಹಿಂದೆ ಸರ್ಕಾರಿ ಹುದ್ದೆಗಳಲ್ಲಿ 5 ಲಕ್ಷ ಜನ ನಾಯಕ ಸಮಾಜದವರು ಕೆಲಸ ಮಾಡುತ್ತಿದ್ದರು. ಈಗ ಮೀಸಲಾತಿ, ಒಳ ಮೀಸಲಾತಿ ಎಂಬ ಗೊಂದಲಗಳಿಂದ 3 ಲಕ್ಷಕ್ಕೆ ಇಳಿದಿದೆ. ಈ ಬಗ್ಗೆ ಸಮಾಜದವರು ವಿಚಾರ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಹೆಗ್ಗಡೆ ಶಾಂತವಾಗಿದ್ದಾರೆ ಅಂದ್ರೆ ಅದಕ್ಕೆ ಮಂಜುನಾಥ ಸ್ವಾಮಿ ಕಾರಣ: ಡಾ.ವೀರೇಂದ್ರ ಹೆಗ್ಗಡೆ
Advertisement
Advertisement
ನಾಯಕ ಸಮಾಜ ಕಳೆದ 30 ವರ್ಷಗಳಿಂದ ವಿವಿಧ ಸಮಸ್ಯೆಗಳಿಗಾಗಿ ಹೋರಾಟ ನಡೆಸುತ್ತಾ ಬರುತ್ತಿದೆ. ಎಲವನ್ನೂ ಸರ್ಕಾರವೇ ಈಡೇರಿಸಬೇಕು ಎಂದರೆ ಆಗಲ್ಲ. ಯಾವ ರಾಜಕಾರಣಿಗೂ ಅಧಿಕಾರ ಶಾಶ್ವತವಲ್ಲ. ಇರುವ ಸಮಯದಲ್ಲಿ ಎಲ್ಲ ಸಮುದಾಯದ ಜನರಿಗೆ ಉತ್ತಮ ಕೆಲಸ ಮಾಡಿಕೊಡಬೇಕು. ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರ್ಕಾರ ಮನವಿ ಮಾಡಿದರೂ, ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ಈಗಲಾದರೂ ಕೇಂದ್ರ ಸರ್ಕಾರ ಮನಸ್ಸು ಮಾಡಬೇಕು. ಯಾವುದೇ ಜನಪ್ರತಿನಿಧಿ ಕಾರ್ಯಕ್ರಮಗಳಿಗೆ ಹೋದಾಗ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿದಾಗ ಮಾತ್ರ ಅದಕ್ಕೊಂದು ಅರ್ಥ ಸಿಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: World Cup 2023: ಮಾರಕ ಬೌಲಿಂಗ್ ದಾಳಿಗೆ ತಿಣುಕಾಡಿದ ಭಾರತ – ಇಂಗ್ಲೆಂಡ್‌ಗೆ 230 ರನ್ ಗುರಿ
Web Stories