ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿಯವರಿಗೆ (Satish Jarkiholi) ಸಿಎಂ ಆಗುವ ಸಾಮರ್ಥ್ಯ ಇದೆ. ಅವರು ಮುಂದೆ ಸಿಎಂ ಆಗಿಯೇ ಆಗುತ್ತಾರೆ ಎಂದು ನೂತನ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.
ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸತೀಶ್ ಜಾರಕಿಹೊಳಿಯವರಿಗೆ ಡಿಸಿಎಂ ಸ್ಥಾನ ಕೈತಪ್ಪಿದ್ದರ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ಸತೀಶ್ ಅವರಿಗೆ ಡಿಸಿಎಂ ಅಲ್ಲ, ರಾಜ್ಯದ ಮುಖ್ಯಮಂತ್ರಿಯಾಗುವ ಸಾಮಥ್ರ್ಯವಿದೆ. ಮುಂದೆ ಖಂಡಿತಾ ಸಿಎಂ ಆಗುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಸಚಿವರಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಸಚಿವದ್ವಯರ ಆಗಮನ
Advertisement
Advertisement
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಈ ಹಿಂದೆ ನಡೆದ ಭ್ರಷ್ಟಾಚಾರದ ತನಿಖೆ ನಡೆಸುತ್ತಿರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇನ್ನೂ ಸಚಿವರಿಗೆ ಅಧಿಕೃತವಾಗಿ ಇಲಾಖೆಗಳ ಹಂಚಿಕೆ ಆಗಿಲ್ಲ. ನಾನು ಸಚಿವೆ ಆಗಿ ಪ್ರಮಾಣವಚನ ಸ್ವೀಕರಿಸಿ ಇನ್ನೂ 24 ಗಂಟೆಯಾಗಿಲ್ಲ. ರಾಜ್ಯದ ಜನರು, ಮುಖ್ಯಮಂತ್ರಿ ಹಾಗೂ ಡಿಸಿಎಂ ಮೆಚ್ಚುವಂತಹ ಆಡಳಿತ ನೀಡುತ್ತೇನೆ. ಯಾವುದೇ ಇಲಾಖೆ ನೀಡಿದರೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇನೆ ಎಂದಿದ್ದಾರೆ.
Advertisement
Advertisement
ರಾಜ್ಯದಲ್ಲಿ 70 ಸಾವಿರ ಅಂಗನವಾಡಿ ಕೇಂದ್ರಗಳಿವೆ. ಬಹಳಷ್ಟು ಕಡೆ ಸ್ವಂತ ಕಟ್ಟಡಗಳಿಲ್ಲ. ಅಂಗನವಾಡಿ ಶಿಕ್ಷಣದಲ್ಲಿ ಗಣನೀಯ ಬದಲಾವಣೆ ತರುವ ಆಸೆ ಇದೆ. ಇಲಾಖೆಯನ್ನು ಅರಿಯಲು ಸ್ವಲ್ಪ ಸಮಯಬೇಕು. ಒಂದೇ ದಿನದಲ್ಲಿ ಎಲ್ಲ ಬದಲಾವಣೆ ಅಸಾಧ್ಯ. ಹಂತ ಹಂತವಾಗಿ ಅಗತ್ಯ ಬದಲಾವಣೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಉದ್ಘಾಟನೆಯ ಸವಿನೆನಪಿಗೆ ವಿಶೇಷ ಅಂಚೆ ಚೀಟಿ, 75 ರೂ. ನಾಣ್ಯ ಬಿಡುಗಡೆ