ಬೆಳಗಾವಿ: ಕಾಂಗ್ರೆಸ್‌ನಲ್ಲಿ (Congress) ಮತ್ತೆ ಮುಂದಿನ ಮುಖ್ಯಮಂತ್ರಿ (CM) ಬಗ್ಗೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ ತೆರೆದ ವೇದಿಕೆಯ ಮೇಲೆಯೇ ಸತೀಶ್ ಜಾರಕಿಹೊಳಿ (Satish Jarkiholi) ಮುಂದಿನ ಸಿಎಂ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ (Vishwas Vaidya) ಹೇಳಿಕೆ ನೀಡಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಮಾತನಾಡಿರುವ ವಿಶ್ವಾಸ ವೈದ್ಯ, ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಾತೀತವಾಗಿ ಪ್ರಭಾವ ಬೆಳೆಸಿಕೊಂಡಿರುವ ಸತೀಶ್ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ ಎಂದು ಹೇಳಿದ್ದಾರೆ.
Advertisement
Advertisement
ದೀಪಾವಳಿ ಹಾಗೂ ರಾಜ್ಯೋತ್ಸವ ನಿಮಿತ್ತ ರಸಮಂಜರಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮ ಉದ್ಘಾಟಕರಾಗಿ ಭಾಗಿಯಾಗಿದ್ದ ಸವದತ್ತಿ ಶಾಸಕ ಸಿಎಂ ವಿಚಾರದ ಬಗ್ಗೆ ಯಾರು ಕೂಡಾ ಮಾತನಾಡಬಾರದು ಎಂದು ಆದೇಶಿಸಿದ್ದರೂ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್
Advertisement
ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು ಅನ್ನೋ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯವೂ ಸಾಕಷ್ಟು ಚರ್ಚೆಗಳು ಆಗ್ತಿವೆ. ಸತೀಶ್ ಜಾರಕಿಹೊಳಿ ಕೂಡ ನೇರವಾಗಿಯೇ ಹಲವು ಬಾರಿ ನಾನು 2028 ರಲ್ಲಿ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಈ ನಡುವೆ ಸತೀಶ್ ಜಾರಕಿಹೊಳಿಯವರ ಮೈಸೂರು ಪ್ರವಾಸ, ದುಬೈ ಪ್ರವಾಸಗಳ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿದ್ದು ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿ ಸಿಎಂ ಸ್ಥಾನದ ಕುರಿತು ಚರ್ಚೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.
Advertisement
ಇದೀಗ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅಧಿಕಾರ ಹಂಚಿಕೆಯಾದರೆ ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ರೇಸ್‌ನಲ್ಲಿ ಇರುತ್ತೇನೆ ಎಂಬ ಸಂದೇಶವನ್ನು ತಮ್ಮ ಆಪ್ತ ಶಾಸಕರ ಮೂಲಕ ಸತೀಶ್ ಜಾರಕಿಹೊಳಿ ರವಾನೆ ಮಾಡಿದ್ದಾರೆ ಎನ್ನುವ ಗುಸುಗುಸು ಚರ್ಚೆಗಳು ನಡೆದಿವೆ. ಇದನ್ನೂ ಓದಿ: Exclusive: ನಾನು ಬ್ಲೂ ಫಿಲಂ ತೋರಿಸಿದ್ರೆ ರಾಜಕೀಯ ನಿವೃತ್ತಿ: ಡಿಕೆಶಿ