– ದಲಿತ ಸಿಎಂ ವಿಚಾರ; ಅವಕಾಶ ಬರುವವರೆಗೆ ಕಾಯಬೇಕು, ಈಗ ಅವಕಾಶ ಇಲ್ಲ
ಬೆಂಗಳೂರು: ಸಿಎಂ ಸ್ಥಾನದ ವಿಚಾರವೇ ಬೇರೆ, ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿರೋದೇ ಬೇರೆ. ಸಿಎಂ ಸ್ಥಾನವಾಗಲೀ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯಾಗಲಿ ಹೇಳಿಲ್ಲ ಎಂದು ಯತೀಂದ್ರ ಹೇಳಿಕೆಯನ್ನ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತೆ ಸಮರ್ಥಿಸಿಕೊಂಡಿದ್ದಾರೆ.
ಈ ವಿಚಾರವಾಗಿ ಬೆಂಗಳೂರಲ್ಲಿ (Bengaluru) ಮಾತನಾಡಿದ ಅವರು, ನಾನು 30 ವರ್ಷದಿಂದ ಅಹಿಂದ ಭಾಗ. ಜೆಡಿಎಸ್‌ನಲ್ಲಿ ಇದ್ದಾಗಲೂ ಅಹಿಂದ ಭಾಗವೇ, ಈಗಲೂ ಅಹಿಂದ ಭಾಗವೇ. ಪರಮೇಶ್ವರ್, ಮಹದೇವಪ್ಪ ಎಲ್ಲರೂ ಅಹಿಂದ ಭಾಗವೇ. ಯತೀಂದ್ರ ಎಲ್ಲಿಯೂ ಸಿಎಂ ಸ್ಥಾನವಾಗಲೀ. ಅಧ್ಯಕ್ಷ ಸ್ಥಾನದ ಬಗ್ಗೆಯಾಗಲಿ ಕೇಳಿಲ್ಲ ಎಂದಿದ್ದಾರೆ.
ಸಿಎಂ ಸ್ಥಾನದ ವಿಚಾರವೇ ಬೇರೆ, ಯತೀಂದ್ರ ಹೇಳಿರೋದೇ ಬೇರೆ. ನಾವೇನೂ ಸಿಎಂ ಸ್ಥಾನ ಕೇಳಿಲ್ಲ. ಯಾರು ಯತೀಂದ್ರ ಹೇಳಿಕೆ ವಿರೋಧಿಸುತ್ತಿದ್ದಾರೋ, ಅವರು ತಪ್ಪು ತಿಳಿದುಕೊಂಡಿದ್ದಾರೆ. ಅಹಿಂದ ಒಕ್ಕೂಟ, ಅಹಿಂದ ಹೋರಾಟ ಮೊದಲಿನಿಂದಲೂ ಇದೆ ಎಂದಿದ್ದಾರೆ. ಇದನ್ನೂ ಓದಿ: ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯಅಹಿಂದ ನಾಯಕತ್ವಕ್ಕೂ, ಸಿಎಂ ಗಾದಿಗೂ ಯಾವುದೇ ಸಂಬಂಧ ಇಲ್ಲ. ಯತೀಂದ್ರ ಅವರು ಅಹಿಂದ ನಾಯಕತ್ವ ಮುನ್ನಡೆಸುತ್ತಾರೆ ಎಂಬ ಅರ್ಥದಲ್ಲಿ ಹೇಳಿದ್ದಾರೆ. ನೋಡೋಣ ಸನ್ನಿವೇಶ, ಸಂದರ್ಭ ನೋಡಿ ನಿರ್ಧಾರ ಮಾಡುತ್ತೇನೆ. ಸಿಎಂ ಗಾದಿಗೆ ನಾನೇನು ಈಗ ಕೇಳಿಲ್ಲ. ಮುಂದೆ ನೋಡೋಣ ಎಂದು ಹೇಳಿದ್ದಾರೆ.
ಅವಕಾಶಕ್ಕಾಗಿ ಕಾಯಬೇಕು
ದಲಿತ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅವಕಾಶ ಬರುವವರೆಗೂ ಕಾಯಬೇಕು. ಈಗಂತೂ ಅವಕಾಶ ಇಲ್ಲ. ಸಮಯಕ್ಕಾಗಿ ಕಾಯಬೇಕು. ಅವಕಾಶ ಸೃಷ್ಟಿ ಆಗಬೇಕು ಅಲ್ಲಿ ತನಕ ಕಾಯಬೇಕು ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ, JDS ಟ್ರಂಕ್ ವಾರ್ – ಹೆಚ್‌ಡಿಕೆ ಸಾಧನೆ ಪಟ್ಟಿ ಬಿಡುಗಡೆ ಮಾಡಿ ಟಾಂಗ್
ನವೆಂಬರ್ ಕ್ರಾಂತಿ ಎಲ್ಲ ಆಗಲ್ಲ. ಇನ್ನೊಂದು 20 ರಿಂದ 30 ದಿನ ಇದೆ ಅಷ್ಟೇ. ಏನಾಗುತ್ತೆ ನೋಡೋಣ. ಕ್ರಾಂತಿ ಆಗೋದಕ್ಕೆ ಹೈಕಮಾಂಡ್ ಬಿಡಬೇಕಲ್ವ? ಹೈಕಮಾಂಡ್ ಹಾಗೆಲ್ಲ ಮಾಡೋಕೆ ಬಿಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಏಕನಾಥ್ ಶಿಂಧೆ ಒಬ್ಬರೇ, ಅಜಿತ್ ಪವಾರ್ ಕೂಡ ಒಬ್ಬರೇ, ಇನ್ನೊಬ್ಬ ಏಕನಾಥ್ ಶಿಂಧೆ, ಪವಾರ್ ಹುಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಕೆಶಿ ಬಣಕ್ಕೆ ಮಾರ್ಮಿಕವಾಗಿ ಟಕ್ಕರ್ ಕೊಟ್ಟಿದ್ದಾರೆ.
2028ರ ಚುನಾವಣೆ ಆಗಬೇಕು. ಅವತ್ತು ಸ್ಥಿತಿಗತಿ ನೋಡಿಕೊಂಡು ನಿರ್ಧಾರ ಮಾಡೋಣ. ಪಕ್ಷದ ಹೈಕಮಾಂಡ್ ಯಾರನ್ನು ಏನು ಮಾಡಬೇಕು ನಿರ್ಧಾರ ಮಾಡ್ತಾರೆ. ಪಕ್ಷಕ್ಕೂ 70 ವರ್ಷದ ಅನುಭವ ಇದೆ. ಅವರು ಎಲ್ಲವನ್ನೂ ನಿರ್ಧಾರ ಮಾಡ್ತಾರೆ. ಡಿಕೆಶಿ ಡೆಡ್‌ಲೈನ್ ಬಗ್ಗೆ ನನಗೆ ಮಾಹಿತಿ ಇಲ್ಲ. ಪಾರ್ಟಿ ಕಚೇರಿಗಳನ್ನ ಎಲ್ಲಾ ಕಡೆ ಮಾಡಬೇಕು ಅಂತ ಅವರ ಕನಸಿದೆ ಎಂದಿದ್ದಾರೆ.

