ಬೆಳಗಾವಿ: ಮಂತ್ರಿಗಾಗಿ ಕಾದು ಕುಳಿತ ರಮೇಶ್ ಜಾರಕಿಹೊಳಿ (Ramesh Jarakiholi) ಕಲ್ಲು ಹೊಡೆಯಬಾರದು ಅಂತಾ ಚಾಕಲೇಟ್ ತಿನ್ನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಹೋದರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarakiholi) ವ್ಯಂಗ್ಯವಾಡಿದ್ದಾರೆ.
Advertisement
ಮುಂದಿನ ಚುನಾವಣೆಯಲ್ಲಿ ಬೆಳಗಾವಿ (Belgavi) ಜಿಲ್ಲೆಗೆ ರಮೇಶ್ ಜಾರಕಿಹೊಳಿ ನೇತೃತ್ವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪಕ್ಷ ಕಟ್ಟಿದ ಯಡಿಯೂರಪ್ಪ ಅವರನ್ನೇ ಸೈಡ್ ಲೈನ್ ಮಾಡಿದ್ದಾರೆ. ಯಡಿಯೂರಪ್ಪನವರಿಗೆ (Yediyurappa) ನೇತೃತ್ವ ಕೊಡುತ್ತಿಲ್ಲ. ಇನ್ನೂ ರಮೇಶ್ ಜಾರಕಿಹೊಳಿ ಯಾವ ಲೆಕ್ಕ? ಬಿಜೆಪಿ (BJP) ನಾಯಕರು ರಮೇಶ್ ಜಾರಕಿಹೊಳಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಮಂತ್ರಿಗಾಗಿ ಕಾದು ಕುಳಿತ ರಮೇಶ್ ಕಲ್ಲು ಎಸೆಯಬಾರದು ಅಂತಾ ಚಾಕಲೇಟ್ ತಿನ್ನಿಸುವ ಕೆಲಸ ಮಾಡುತ್ತಿದ್ದಾರೆ. ರಮೇಶ್ ಜಾಕಿಹೊಳಿ ಸಿಟ್ಟಾದರೆ ಏನಾದರೂ ಮಾಡಬಹುದು ಎಂಬ ಭಯ ಬಿಜೆಪಿ ನಾಯಕರಿಗೆ ಇದೆ. ಹಿಂದಿನ ಸರ್ಕಾರ ಕೆಡವಿದ ರಮೇಶ್ ಜಾರಕಿಹೊಳಿಗೆ ಈ ಸರ್ಕಾರ ಕೆಡುವುದು ದೊಡ್ಡ ಮಾತಲ್ಲ. ಒಂದು ಬಾರಿ ಬೈಪಾಸ್ ಸರ್ಜರಿ ಮಾಡಿದವನಿಗೆ ಎರಡನೇ ಬೈಪಾಸ್ ಸರ್ಜರಿ ಮಾಡುವುದು ದೊಡ್ಡ ಕೆಲಸವಲ್ಲ. ಹಾಗಾಗಿ ರಮೇಶ್ ಜಾರಕಿಹೊಳಿಗೆ ತಿಂಗಳಿಗೊಮ್ಮೆ ಚಾಕಲೇಟ್ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ರಿಲಯನ್ಸ್ ಆಸ್ಪತ್ರೆಯನ್ನು ಸ್ಫೋಟಿಸುತ್ತೇನೆ- ಮುಖೇಶ್ ಅಂಬಾನಿ, ಕುಟುಂಬಸ್ಥರಿಗೆ ಜೀವ ಬೆದರಿಕೆ
Advertisement
Advertisement
ಸಿಎಂ (BasavarajBommai) ಈಗಾಗಲೇ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಮೂರು ಬಾರಿ ಮಾತನಾಡಿದ್ದಾರೆ. ಈಗ ಮತ್ತೆ ಈ ಕುರಿತಂತೆ ಬಿಜೆಪಿ ಹೈಕಮಾಂಡ್ ಭೇಟಿಗೆ ದೆಹಲಿಗೆ ಹೊರಟಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಗುಜರಾತ್ ಚುನಾವಣೆಯಲ್ಲಿ (Gujrat Election) ಬ್ಯೂಸಿ ಆಗಿದ್ದಾರೆ. ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ಚುನಾವಣಾ ನಡೆಸುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರನ್ನು ನಮ್ಮ ನಾಯಕ ಅಂತಾ ಒಪ್ಪಿಕೊಂಡಿಲ್ಲ. ಇನ್ನೂ ರಮೇಶ್ ಜಾರಕಿಹೊಳಿ ಯಾವ ಲೆಕ್ಕ? ರಮೇಶ್ ಜಾರಕಿಹೊಳಿಗೆ ಆಗಾಗ ಏನಿದ್ದರೂ ಸಮಾಧಾನಕರ ಬಹುಮಾನ ಕೊಡುತ್ತಾರೆ. ಹೀಗಾಗಿ ರಮೇಶ್‍ಗೆ ಬಂದಾಗೊಮ್ಮೆ ಚಾಕಲೇಟ್ ಕೊಟ್ಟು ಹೋಗುತ್ತಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ಸಿಗರ ಭಾರತ ಬಿಟ್ಟು ಓಡೋ ಯಾತ್ರೆ: ನಳೀನ್ ಕುಮಾರ್ ಕಟೀಲ್