ಕೊಪ್ಪಳ: ಬೆಳಗಾವಿ (Belagavi) ರಾಜಕಾರಣದಲ್ಲಿ ಯಾವುದೇ ಸಮಸ್ಯೆ ಇಲ್ಲ. ನಮ್ಮ ಆಂತರಿಕ ವಿಚಾರಗಳನ್ನು ಹೊರಗಡೆ ಹೇಳಬೇಡಿ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ತಿಳಿಸಿದರು.
ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಳಗಾವಿ ರಾಜಕಾರಣದಲ್ಲಿ ಯಾವುದೇ ಸಮಸ್ಯೆ ಇಲ್ಲ. ದಲಿತ ಸಿಎಂ ವಿಚಾರದ ಬಗ್ಗೆ ಯಾವುದೇ ಚರ್ಚೆ ಇಲ್ಲ. ಅದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿ ಸದ್ಯ ಸಿಎಂ ಇದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಹೆಗ್ಗಡೆ ಶಾಂತವಾಗಿದ್ದಾರೆ ಅಂದ್ರೆ ಅದಕ್ಕೆ ಮಂಜುನಾಥ ಸ್ವಾಮಿ ಕಾರಣ: ಡಾ.ವೀರೇಂದ್ರ ಹೆಗ್ಗಡೆ
Advertisement
Advertisement
ಪರಮೇಶ್ವರ್ ಮನೆಯಲ್ಲಿ ಡಿನ್ನರ್ ವಿಚಾರವಾಗಿ ಮಾತನಾಡಿ, ಊಟಕ್ಕೆ ಹೋಗೋದು, ಸೇರೋದು ಸಹಜ ಪ್ರಕ್ರಿಯೆ. ನಾನು ಯಾರ ಮೇಲೆ ಸಿಟ್ಟಾಗಬೇಕು ಹೇಳಿ? ನಾನೇ ಹೆಡ್ ಆಪ್ ದಿ ಡಿಪಾರ್ಟ್ಮೆಂಟ್ ಅಲ್ಲಿ. ನಾನು ಯಾಕೆ ಯಾರ ಮೇಲೆ ಸಿಟ್ಟಾಗಲಿ, ನಾನೇ ಎಲ್ಲಾ ಸರಿ ಮಾಡ್ತೀನಿ ಎಂದರು.
Advertisement
ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಏಕನಾಥ್ ಶಿಂಧೆ ಎಂಬ ಬಗ್ಗೆ ಪ್ರತಿಕ್ರಿಯಿಸಿ, ಆ ರೀತಿ ಯಾವುದೂ ಇಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಇದೆ. ಇಲ್ಲಿ ಒಟ್ಟಾಗಿ ಇದ್ದೀವಿ. ಅಂತಹ ಪ್ರಶ್ನೆ ಉದ್ಭವ ಆಗುವುದಿಲ್ಲ. ನಿಮಗೆ ಹಾಗೆ ಅನ್ನಿಸಿರಬಹುದು, ನಮಗೆ ಹಾಗೆ ಅನಿಸಿಲ್ಲ. ಪರಮೇಶ್ವರ್ ಮನೆಗೆ ಊಟಕ್ಕೆ ಹೋಗಿದ್ದು ಅಷ್ಟೆ. ಅಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ. ನಮ್ಮ ಆಂತರಿಕ ವಿಚಾರಗಳನ್ನ ಹೊರಗಡೆ ಹೇಳಬೇಡಿ ಅಂತ ಡಿಕೆಶಿ ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪವರ್ ಶೇರಿಂಗ್ ಬಗ್ಗೆ ಪಕ್ಷ ತೀರ್ಮಾನಿಸುತ್ತೆ: ಕೃಷ್ಣ ಭೈರೇಗೌಡ
Advertisement
ಈ ವೇಳೆ ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜೆ.ಎನ್. ಗಣೇಶ್ ಉಪಸ್ಥಿತರಿದ್ದರು.
Web Stories