ಬೆಂಗಳೂರು: ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ನಂತರ ಹೈಕಮಾಂಡ್ ತೀರ್ಮಾನ ಏನು ಅನ್ನೋದು ಗೊತ್ತಿಲ್ಲ ಮುಂದೆ ತೀರ್ಮಾನ ಮಾಡುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಸಿಎಂ, ಡಿಸಿಎಂ ದೆಹಲಿ ಭೇಟಿ ನಮಗೆ ಅಷ್ಟೊಂದು ಗೊತ್ತಿಲ್ಲ ವಿಷ್ಯ ಏನೂ ಗೊತ್ತಿಲ್ಲ. ಸಾಮಾನ್ಯವಾಗಿ ಇಲ್ಲಿ ನಡೀತಿರೋ ವಿಚಾರವನ್ನ ಹೈಕಮಾಂಡ್ ಗಮನಕ್ಕೆ ತರೋ ಕೆಲಸ ಆಗ್ತಿದೆ. ಅದೇ ಕಾರಣಕ್ಕೆ ದೆಹಲಿಗೆ ಹೋಗಿದ್ದಾರೆ. ಪ್ರಾಸಿಕ್ಯೂಷನ್ (Prosecution) ನಂತ್ರ ಹೈಕಮಾಂಡ್ ತೀರ್ಮಾನ ಏನು? ಎಂಬ ವಿಚಾರದ ಬಗ್ಗೆ ಯಾವುದೇ ಕ್ಲಾರಿಫಿಕೇಷನ್ ಬಂದಿಲ್ಲ. ಕೋರ್ಟ್ ನಲ್ಲಿ ಆದೇಶ ಬಂದ್ಮೇಲೆ ಮುಂದಿನ ತೀರ್ಮಾನ. ಇಂಡಿಯಾ ಒಕ್ಕೂಟ ಏನು ತೀರ್ಮಾನ ಕೈಗೊಳ್ಳುತ್ತದೆ ನೋಡಬಹುದು. ಬೇರೆ ಕಡೆ ಕೂಡ ಈ ರೀತಿ ಕೆಲಸ ಆಗ್ತಿವೆ ಎಂದು ಹೇಳಿದ್ದಾರೆ.
ಹಲವು ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಸರ್ಕಾರಗಳ ನಡುವೆ ಸಂಘರ್ಷ ನಡೆದಿವೆ. ತಮಿಳುನಾಡು, ಬಂಗಾಳ ಸೇರಿ ನಮ್ಮ ರಾಜ್ಯದಲ್ಲೂ ನಡೀತಿದೆ. ರಾಜ್ಯಪಾಲರು ಬಿಲ್ ವಾಪಸ್ ಕಳಿಸಿದ್ದಾರೆ. ಕೆಲ ಬಿಲ್‌ಗಳನ್ನ ವಾಪಸ್ ಕಳಿಸಿದ್ದಾರೆ. ಅವರು ಬಿಲ್ ಕುರಿತು ಸ್ಪಷ್ಟನೆ ಕೇಳೋಕೆ ಹಕ್ಕಿದೆ. ಅದನ್ನ ಸರ್ಕಾರ ಕೂಡ ಉತ್ತರ ಕೊಡುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಾಖಲೆಗಳ ನಾಶ ಪಡಿಸಲು ವೈಟ್ನರ್ ಹಚ್ಚಿದ್ದು ಯಾರು? – ನಾವು ಸರ್ಕಾರ ಬೀಳಿಸಲ್ಲ: ಸಿಎಂ ವಿರುದ್ಧ ಸುನೀಲ್ ಕುಮಾರ್ ಕಿಡಿ
ಇನ್ನೂ ಸರ್ಕಾರ ಅಸ್ಥಿರಗೊಳಿಸುವ ಕುರಿತು ಮಾತನಾಡಿ, ಸರ್ಕಾರ ಅಸ್ಥಿರ ಗೊಳಿಸೋ ವಿಚಾರದ ಬಗ್ಗೆ ಸಿಎಂ ಹೇಳಿದ್ದಾರೆ. ಹಿಂದೆಯಿಂದಲೂ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಆದ್ರೆ ಯಾವುದೇ ಬದಲಾವಣೆ ಆಗಲ್ಲ. 6 ಗಳಿಗೊಮ್ಮೆ ಸರ್ಕಾರ ಬೀಳಿಸೋ ವಿಚಾರ ಮುನ್ನಲೆಗೆ ಬರುತ್ತಿರುತ್ತೆ. ಮುಂದಿನ 4 ವರ್ಷಗಳ ಕಾಲ ನಮ್ಮದೇ ಸರ್ಕಾರ ಅಲ್ಲಿವರೆಗೆ ಬೀಳಿಸುವ ಪ್ರಯತ್ನ ನಡೆಯುತ್ತಲೇ ಇರುತ್ತೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಕಪ್ಪುಚುಕ್ಕಿ ತರುವ ಸುಳ್ಳು ಆರೋಪಕ್ಕೆ ರಾಜ್ಯಪಾಲರ ಸಮ್ಮತಿ: ಸಚಿವ ಎಂ.ಬಿ.ಪಾಟೀಲ್