ಬೆಳಗಾವಿ: ಹಿಂದೂ ಶಬ್ದ ಬಗ್ಗೆ ನೀಡಿದ್ದ ಹೇಳಿಕೆಯು ವಿವಾದವಾಗುತ್ತಿದ್ದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಅವರು ಸಿಎಂ ಬಸವರಾಜ ಬೊಮ್ಮಾಯಿಗೆ (Basavaraj Bommai) ಪತ್ರ ಬರೆದು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.
ನಿಪ್ಪಾಣಿ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಹಿಂದೂ ಶಬ್ದದ ಬಗ್ಗೆ ನೀಡಿದ್ದ ಮಾತು ವಿವಾದಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಪತ್ರ ಬರೆದಿರುವ ಅವರು, ನಾನು ಮಾತನಾಡಿದ್ದ ಹಿಂದೂ ಶಬ್ದದದ ಬಳಕೆ ಕುರಿತು ನನ್ನ ತೇಜೋವಧೆ ಮಾಡಲಾಗುತ್ತಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರಗೊಳಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ. ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರ ಬರೆದ ಜಾರಕಿಹೊಳಿ, ತಮ್ಮ ಹೇಳಿಕೆ ಬಗ್ಗೆ ತನಿಖಾ ಸಮಿತಿ ರಚಿಸುವಂತೆ ಸಿಎಂಗೆ ಮನವಿ ಮಾಡಿದ್ದಾರೆ.
Advertisement
Advertisement
ಪತ್ರದಲ್ಲಿ ಏನಿದೆ?:
ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಕೆಳಕಂಡ ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ. ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತ ದೇಶಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕೆಟ್ಟದಾಗಿದೆ ಎಂದು ಬರೆದಿರುತ್ತಾರೆ ಅಂತಾ ಹೇಳಿರುತ್ತೇನೆ ಮತ್ತು ಇದು ಸಾರ್ವಜನಿಕವಾಗಿ ಚರ್ಚೆ ಆಗಬೇಕಾಗಿರುವದು ಬಹಳ ಅವಶ್ಯಕತೆ ಇದೆ ಎಂದು ಸಹ ಹೇಳಿರುತ್ತೇನೆ.
Advertisement
Advertisement
ಇದನ್ನು ನಾನು ವಿಕಿಪಿಡಿಯಾ, ಪುಸ್ತಕಗಳು, ಶಬ್ದಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧಾರಿತವಾಗಿರುತ್ತದೆ. ಕೆಲವು ಪಟ್ಟಬದ್ಧ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿರುತ್ತದೆ. ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಟಿಸಿದವರ ಮೇಲೆ ತನಿಖೆ ಮಾಡುವಂತೆ ವಿನಂತಿಸಿಕೊಳ್ಳುತ್ತೇನೆ.
ಮತ್ತೊಮ್ಮೆ ತಮ್ಮಲ್ಲಿ ಕೇಳಿಕೊಳ್ಳುವದೇನೆಂದರೆ, ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. ಹಾಗೂ ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕಿಡಾಗಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರ ಗೊಳಿಸುತ್ತಿರುವುದರಿಂದ, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಮತ್ತು ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ತಿಳಿಸಿದ್ದಾರೆ.
ಏನಿದು ವಿವಾದ?:
ಭಾರತಕ್ಕೂ, ಪರ್ಷಿಯನ್‍ಗೂ ಏನ್ ಸಂಬಂಧ? ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಧರ್ಮ, ಜಾತಿ ಬಿಟ್ಟರೆ ಬಿಜೆಪಿ- ಕಾಂಗ್ರೆಸ್‌ಗೆ ಬೇರೆ ವಿಷಯ ಇಲ್ಲ: ಕುಮಾರಸ್ವಾಮಿ
ಈ ಹೇಳಿಕೆಗೆ ವಿವಿಧ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ ಸೇರಿದಂತೆ ಅನೇಕ ರಾಜಕೀಯ ಪಕ್ಷಗಳಿಂದಲೂ ಜಾರಕಿಹೊಳಿ ಟೀಕೆಗೆ ಗುರಿಯಾಗಿದ್ದರು. ಅಷ್ಟೇ ಅಲ್ಲದೇ ಸ್ವಪಕ್ಷದ ನಾಯಕರಾದ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಈ ಹೇಳಿಕೆಯನ್ನು ವಿರೋಧಿಸಿದ್ದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿಯನ್ನು ಹಿಂದೂಸ್ಥಾನದಿಂದ ಗಡಿಪಾರು ಮಾಡಿ: ಬಿಜೆಪಿ ಒತ್ತಾಯ