– ರಾಹುಲ್ ಜಾರಕಿಹೊಳಿ ಭರ್ಜರಿ ಹುಟ್ಟು ಹಬ್ಬ ಆಚರಣೆ
ಚಿಕ್ಕೋಡಿ: ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ರನಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟುಹಬ್ಬವನ್ನ ಆಚರಣೆ ಮಾಡಲಾಯಿತು. ಇದನ್ನೂ ಓದಿ: ತುಕುಡೆ ಗ್ಯಾಂಗಿನ ನಾಯಕರ ಸಮಾಧಿ ಮೇಲೆ ಬಿಜೆಪಿ, ಸಂಘ ಬಲವಾಗಿ ಬೆಳೆದಿದೆ: ಸಿ.ಟಿ.ರವಿ
ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ, ಹುಟ್ಟುಹಬ್ಬದ ಆಚರಣೆಯಲ್ಲಿ ಐದು ಸಾವಿರಕ್ಕೂ ಹೆಚ್ಚಿನ ಜನ ಪಾಲ್ಗೊಂಡಿದ್ದರು. ಅಷ್ಟೇ ಅಲ್ಲದೇ 10ಕ್ಕೂ ಹೆಚ್ಚು ಮಠಾಧೀಶರು ಸಮಾರಂಭದಲ್ಲಿ ಭಾಗವಹಿಸಿ ರಾಹುಲ್ ಜಾರಕಿಹೊಳಿ ಅವರಿಗೆ ಆಶೀರ್ವಾದ ಮಾಡಿದರು. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಹುಲ್ ಜಾರಕಿಹೊಳಿ ಅವರನ್ನ ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಈ ಅದ್ದೂರಿ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: ಬಿಜೆಪಿಗೆ ವಲಸಿಗರು ಸೊಸೆ ಇದ್ದಂತೆ, ಮನೆಯಲ್ಲಿ ಎಲ್ಲರ ವಿಶ್ವಾಸ ಗಳಿಸಬೇಕು: ಸುಧಾಕರ್
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಸ್ಪರ್ಧೆ ಮಾಡುವದು ನಿಶ್ಚಿತವಾಗಿದೆ. ಈಗಿನಿಂದಲೇ ನನ್ನ ಪುತ್ರ ರಾಹುಲ್ ಹಾಗೂ ಪುತ್ರಿ ಪ್ರೀಯಾಂಕಾ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಯಮಕನಮರಡಿ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನ ತೀರ್ಮಾನ ಮಾಡಬೇಕಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕಿರಣ್ ರಜಪೂತ, ಮಹಾವೀರ ಮೊಹಿತೆ, ವಿಶ್ವಾಸ ವೈದ್ಯ, ಲಕ್ಷ್ಮಣ ಚಿಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.