ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಶಾಸಕ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.
ಸತೀಶ್ ಜಾರಕಿಹೊಳಿ ಇ-ಮೇಲ್ ಮೂಲಕ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ. ಇವರು ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.
Advertisement
ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಯಮಕನಮರಡಿ ಮತ್ತು ಮೈಸೂರನಲ್ಲಿ ಜಾರಕಿಹೊಳಿ ಬೆಂಬಲಿಗರು ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಇತ್ತ ಜಾರಕಿಹೊಳಿ ಬೆಂಬಲಿಗರಾಗಿರುವ ಜಿಲ್ಲಾಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
Advertisement
ಈ ಹಿಂದೆ ಕೂಡ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗಲಿಲ್ಲ, ಅವರ ಕುಟುಂಬದ ಸಹೋದರನಿಗೆ ಸಚಿವ ಸ್ಥಾನ ದೊರೆತಿತ್ತು. ಈಗಲೂ ಕೂಡ ಸಚಿವ ಸ್ಥಾನ ಕೈ ತಪ್ಪಿದೆ ಎಂದು ಬೆಂಬಲಿಗರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.