BelgaumDistrictsKarnatakaLatestLeading NewsMain Post

ತಿರುಪತಿ ತಿಮ್ಮಪ್ಪ ಮೂರು ತರ ಕಾಣೋ ರೀತಿಯಲ್ಲಿ ಜಾರಕಿಹೊಳಿ ಮಾತಾಡ್ತಾರೆ: ಸತೀಶ್

Advertisements

ಬೆಳಗಾವಿ: ತಿರುಪತಿ ತಿಮ್ಮಪ್ಪ ಮೂರು ತರ ಕಾಣುವ ರೀತಿಯಲ್ಲಿ ರಮೇಶ್ ಜಾರಕಿಹೊಳಿ ಅವರು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದರು.

ಬೆಳಗಾವಿ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರಿಗೆ ವೆಸ್ಟ್ ಬಾಡಿ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರನ್ನು ಒಂದು ಸರಿ ಗುರು ಎಂದರೆ ಇನ್ನೊಮ್ಮೆ ಬೇರೆ ರೀತಿಯಾಗೆ ಮಾತನಾಡುತ್ತಾರೆ. ಹೀಗೆ ಜಾರಕಿಹೊಳಿ ಬೆಳಗ್ಗೆ ಒಂದು ರೀತಿ, ಸಂಜೆ ಒಂದು ರೀತಿ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ಅಷ್ಟೇ ಅಲ್ಲದೇ ರಮೇಶ್ ಜಾರಕಿಹೊಳಿ ನಾನು ಬಿಜೆಪಿಯಲ್ಲಿ ಇದ್ದರೂ ಕೂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಗುರು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ನೇಹಿತ ಅಂತ ಹೇಳುತ್ತಾರೆ. ಈ ಬಗ್ಗೆ ಹೆಚ್ಚೆನೂ ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಒಬ್ಬ ವೇಸ್ಟ್‌ ಬಾಡಿ: ರಮೇಶ್‌ ಜಾರಕಿಹೊಳಿ ವಾಗ್ದಾಳಿ

ಲಖನ್ ಜಾರಕಿಹೊಳಿ ಬಿಜೆಪಿ ಸೇರ್ಪಡೆಯಾಗುತ್ತಾರಾ ಎಂಬ ವಿಚಾರವಾಗಿ ಮಾತನಾಡಿದ ಅವರು, ಅದು ಲಖನ್ ಅವರಿಗೆ ಬಿಟ್ಟ ವಿಚಾರವಾಗಿದೆ. ನಾನು ಆ ಬಗ್ಗೆ ಚರ್ಚೆ ಮಾಡಲ್ಲ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಸುಧಾಕರ್ ನಮ್ಮ ಲೀಡರ್ ಅಲ್ಲ, ಮಂಡ್ಯದ ಬಗ್ಗೆ ಅವರಿಗೇನ್ ಮಾಹಿತಿ ಇದೆ?: ನಾರಾಯಣ ಗೌಡ

ಬೆಳಗಾವಿ ಪರಿಷತ್ ಫಲಿತಾಂಶ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಜನ ನಮ್ಮ ಪರವಾಗಿದ್ದಾರೆ. 2 ಸ್ಥಾನದಲ್ಲಿ ಕಡಿಮೆ ಅಂತರದಿಂದ ಸೋತಿದ್ದೇವೆ. ಈ ಬಾರಿಯ ಚುನಾವಣೆ ನಮ್ಮ ಪರವಾಗಿದ್ದಾರೆ ಎನ್ನುವುದಕ್ಕೆ ವಿಧಾನ ಪರಿಷತ್ ಚುನಾವಣೆಯೆ ಸಾಕ್ಷಿ. ಬೆಳಗಾವಿ ಚುನಾವಣೆ ಫಲಿತಾಂಶದಿಂದ ನಮಗೆ ಶಕ್ತಿ ಬಂದಿದೆ. ಈ ಚುನಾವಣೆ ವಿಧಾನಸಭೆಗೆ ಒಂದು ಮೆಟ್ಟಿಲು ಎಂದರು.

Leave a Reply

Your email address will not be published.

Back to top button