ನವದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್ (Satyendar Jain) ಬಂಧನ ರಾಜಕೀಯ ಪ್ರೇರಿತ. ಅವರನ್ನು ಉದ್ದೇಶಪೂರ್ವಕವಾಗಿ ಗುರಿ ಮಾಡಲಾಗಿದೆ ಮತ್ತು ಇದು ಸಂಪೂರ್ಣ ವಂಚನೆಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ವಾಗ್ದಾಳಿ ನಡೆಸಿದ್ದಾರೆ.
Advertisement
ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳಿಂದ ಸತ್ಯೇಂದ್ರ ಜೈನ್ ಬಂಧನದ ಕುರಿತು ಪ್ರತಿಕ್ರಿಯಿಸಿದ ಅವರು, ಆಮ್ ಅದ್ಮಿ(AAP) ಪಕ್ಷವು ಭ್ರಷ್ಟಾಚಾರವನ್ನು ಸಹಿಸಿಕೊಳ್ಳುವುದಿಲ್ಲ ಮತ್ತು ತೊಡಗಿಕೊಳ್ಳುವುದಿಲ್ಲ. ನಮ್ಮದು ಅತ್ಯಂತ ಪ್ರಾಮಾಣಿಕ ಸರ್ಕಾರ ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ ಎಂದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅರೆಸ್ಟ್
Advertisement
I have personally studied this (Satyendar Jain's arrest by ED) case, it is completely fraud. We neither tolerate corruption nor we do corruption. We have a very honest govt. He has been targeted because of political reasons. We have faith in our judiciary:Delhi CM Arvind Kejriwal pic.twitter.com/FlA97GOnN3
— ANI (@ANI) May 31, 2022
Advertisement
ಲೋಕೋಪಯೋಗಿ ಇಲಾಖೆಗೆ ಸೃಜನಾತ್ಮಕ ತಂಡಕ್ಕೆ ಖಾಸಗಿ ಸಂಸ್ಥೆಗೆ ಟೆಂಡರ್ ನೀಡುವಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ 2018 ರಲ್ಲಿ ಜೈನ್ ವಿರುದ್ಧ ಕೇಂದ್ರೀಯ ತನಿಖಾ ದಳವು ತನಿಖೆಯನ್ನು ಆರಂಭಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅವರನ್ನು ಬಂಧಿಸಲಾಗಿತ್ತು.