ಇಸ್ಲಾಮಾಬಾದ್: ರಾಜಕೀಯ ಏರಿಳಿತದೊಂದಿಗೆ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನದ ಬೆಂಬಲಕ್ಕೆ ಇಸ್ಲಾಮಿಕ್ ರಾಷ್ಟ್ರವಾದ ಸೌದಿ ಅರೇಬಿಯಾ ನಿಂತಿದೆ. ಪಾಕಿಸ್ತಾನದಲ್ಲಿ 100 ಕೋಟಿ ಅಮೆರಿಕನ್ ಡಾಲರ್ (ಸುಮಾರು 8 ಸಾವಿರ ಕೋಟಿ ರೂಪಾಯಿ) ಹೂಡಿಕೆ ಮಾಡುವುದಾಗಿ ಸೌದಿ ಅರೇಬಿಯಾ ಘೋಷಿಸಿದೆ.
Advertisement
ಈ ಕುರಿತಂತೆ ಸೌದಿ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಫರ್ಹಾನ್ ಬಿನ್ ಅಬ್ದುಲ್ಲಾ ಹಾಗೂ ಅವರ ಪಾಕಿಸ್ತಾನಿ ಸಹವರ್ತಿ ಬಿಲಾವಲ್ ಭುಟ್ಟೋ ಜರ್ದಾರಿ ನಡುವೆ ದೂರವಾಣಿಯಲ್ಲಿ ಮಾತುಕತೆ ನಡೆದಿದೆ. ಇದೇ ವೇಳೆ ಪಾಕಿಸ್ತಾನ ಹಾಗೂ ಸೌದಿ ಅರೇಬಿಯಾದ ಅಂತಾರಾಷ್ಟ್ರೀಯ ಸಂಬಂಧಗಳನ್ನೂ ಗಟ್ಟಿಗೊಳಿಸುವ ಬಗ್ಗೆಯೂ ಚರ್ಚಿಸಲಾಗಿದೆ. ಇದನ್ನೂ ಓದಿ: ಭಾರತದೊಂದಿಗಿನ ಶಾಶ್ವತ ಶಾಂತಿಗೆ ಯುದ್ಧವೊಂದೇ ಆಯ್ಕೆಯಾಗಿಲ್ಲ: ಪಾಕ್ ಪ್ರಧಾನಿ
Advertisement
ಪಾಕಿಸ್ತಾನದ ಆರ್ಥಿಕತೆ ಅಭಿವೃದ್ಧಿಪಡಿಸುವ ಜೊತೆಗೆ ತಮ್ಮ ಬೆಂಬಲ ದೃಢೀಕರಿಸುವ ಸಲುವಾಗಿ ಪಾಕಿಸ್ತಾನದಲ್ಲಿ 1 ಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಮಾಡುವುದಾಗಿ ಹೇಳಿದೆ. ಸೌದಿ ಅರೇಬಿಯಾದ ಈ ನಿರ್ಧಾರವನ್ನೂ ವಿದೇಶಾಂಗ ಸಚಿವರು ಸ್ವಾಗತಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನಕ್ಕೆ ಮಿತ್ರ ರಾಷ್ಟ್ರಗಳು 4 ಶತಕೋಟಿ ಡಾಲರ್‌ಗಳಷ್ಟು ಹಣಕಾಸಿನ ನೆರವನ್ನು ಸ್ವೀಕರಿಸಿದ ನಂತರ ಸೌದಿ ಅರೇಬಿಯಾದ ಹೂಡಿಕೆಯ ಕುರಿತು ಪ್ರಕಟಣೆಯಲ್ಲಿ ತಿಳಿಸಿದೆ.
Advertisement
Advertisement
ಪಾಕಿಸ್ತಾನವು ಮುಂದೂಡಲ್ಪಟ್ಟ ತೈಲ ಸೌಲಭ್ಯದ ಅಡಿಯಲ್ಲಿ ಕತಾರ್‌ನಿಂದ 2 ಶತಕೋಟಿ ಯುಎಸ್ ಡಾಲರ್, ಸೌದಿ ಅರೇಬಿಯಾದಿಂದ 1 ಶತಕೋಟಿ ಯುಎಸ್ ಡಾಲರ್‌ನಷ್ಟು ಹಾಗೂ ವಿವಿಧ ಕ್ಷೇತ್ರಗಳಲ್ಲಿ 1 ಕೋಟಿ ಯುಎಸ್ ಡಾಲರ್ ಹೂಡಿಕೆಗಳನ್ನು ಪಡೆಯಲಿದೆ ಎಂದು ತನ್ನ ಪ್ರಕಟಣೆಯಲ್ಲಿ ಹೇಳಿದೆ.
ಪಾಕಿಸ್ತಾನವು ಮತ್ತೆ ಆರ್ಥಿಕ ಕುಸಿತದ ಅಂಚಿನಲ್ಲಿದ್ದು, ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ದೇಶದ ಸೇನಾ ಮುಖ್ಯಸ್ಥ ಕಮರ್ ಜಾವೇದ್ ಬಾಜ್ವಾ ಅವರು ಸೌದಿಗೆ ಭೇಟಿ ನೀಡಿ ಮಾತುಕತೆ ನಡೆಸಿದ ನಂತರ ಸೌದಿಯು 100 ಶತಕೋಟಿ ಡಾಲರ್‌ಗಳಷ್ಟು ಹೂಡಿಕೆ ಮಾಡಲು ಒಪ್ಪಿಕೊಂಡಿದೆ. ಇದು ಪಾಕಿಸ್ತಾನದ ಆರ್ಥಿಕ ಪುನಶ್ಚೇತನಕ್ಕೆ ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.