ಮುಂಬೈ: ರಿಲಯನ್ಸ್ ಕಂಪನಿ ಭಾರತದ ಇತಿಹಾಸದಲ್ಲಿ ಅತಿ ದೊಡ್ಡ ವಿದೇಶಿ ನೇರ ಹೂಡಿಕೆ(ಎಫ್‍ಡಿಐ) ಸಂಬಂಧ ಸೌದಿ ಕಂಪನಿಯ ಜೊತೆ ಒಪ್ಪಂದ ಮಾಡಿಕೊಳ್ಳಲಿದೆ.
ವಿಶ್ವದ ಅತಿ ದೊಡ್ಡ ತೈಲ ಉತ್ಪಾದನಾ ಕಂಪನಿ ಸೌದಿ ಅರಾಮ್ಕೋ ಜೊತೆ ರಿಲಯನ್ಸ್ ಆಯಿಲ್ ಟು ಕೆಮಿಕಲ್ಸ್(ಒಟಿಸಿ) ಕಂಪನಿ ತನ್ನ ಶೇ.20 ರಷ್ಟು ಪಾಲನ್ನು ಮಾರಾಟ ಮಾಡಲು ಸಮ್ಮತಿ ಸೂಚಿಸಿದೆ. ಒಟ್ಟು 75 ಶತಕೋಟಿ ಡಾಲರ್(5.3 ಲಕ್ಷ ಕೋಟಿ) ಒಪ್ಪಂದಕ್ಕೆ ರಿಲಯನ್ಸ್ ಸಹಿ ಹಾಕಲಿದೆ ಎಂದು ವಾರ್ಷಿಕ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
Advertisement
ಈ ಒಪ್ಪಂದದ ಅನ್ವಯ ಸೌದಿ ಅರಾಮ್ಕೋ ಕಂಪನಿ ಜಾಮ್ ನಗರದಲ್ಲಿರುವ ರಿಲಾಯನ್ಸ್ ರಿಫೈನಿಂಗ್ ಘಟಕಕ್ಕೆ ಪ್ರತಿದಿನ 5 ಲಕ್ಷ ಬ್ಯಾರಲ್ ಕಚ್ಚಾ ತೈಲವನ್ನು ಪೂರೈಸಲಿದೆ. ಇದನ್ನೂ ಓದಿ: ಸೆ.5 ರಿಂದ ಜಿಯೋ ಬ್ರಾಡ್‍ಬ್ಯಾಂಡ್ ಕಮಾಲ್ – ಬೆಲೆ ಎಷ್ಟು? ವಿಶೇಷತೆ ಏನು?
Advertisement
Advertisement
ಸೌದಿ ಅರಾಮ್ಕೋ ಸೌದಿ ಅರೇಬಿಯಾದ ರಾಷ್ಟ್ರೀಯ ಪೆಟ್ರೋಲ್ ಮತ್ತು ನೈಸರ್ಗಿಕ ಗ್ಯಾಸ್ ಕಂಪನಿಯಾಗಿದೆ. ವಿಶ್ವದಲ್ಲೇ ಅತಿ ಹೆಚ್ಚು ಆದಾಯ ಮತ್ತು ವಿಶ್ವದಲ್ಲೇ ಅತಿ ಹೆಚ್ಚು ಲಾಭಗಳಿಸುವ ತೈಲ ಕಂಪನಿಯಾಗಿದೆ.
Advertisement
ಜಾಮ್ ನಗರದಲ್ಲಿರುವ ಘಟಕ ಸದ್ಯ ಪ್ರತಿ ದಿನ 14 ಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮಥ್ರ್ಯವನ್ನು ಹೊಂದಿದ್ದು 2030ರ ವೇಳೆಗೆ 20 ಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಸಂಸ್ಕರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದೇವೆ ಎಂದು ಕೇಂದ್ರ ಸರ್ಕಾರಕ್ಕೆ ಕಂಪನಿ ತಿಳಿಸಿದೆ.
ತೈಲ, ಟೆಲಿಕಾಂ, ರಿಟೇಲ್ ಈ ಮೂರು ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈಯುತ್ತಿರುವ ದೇಶದ ಏಕೈಕ ಕಂಪನಿ ರಿಲಯನ್ಸ್ ಎಂದು ಮುಕೇಶ್ ಅಂಬಾನಿ ವಾರ್ಷಿಕ ಸಭೆಯಲ್ಲಿ ತಿಳಿಸಿದರು.