ರಿಯಾದ್: ಕೋವಿಡ್-19 ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೌದಿ ಅರೇಬಿಯಾ ತನ್ನ ನಾಗರಿಕರನ್ನು ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣೀಸುವುದನ್ನು ನಿಷೇಧಿಸಿದೆ.
- Advertisement 2
ಭಾರತ, ಲೆಬನಾನ್, ಸಿರಿಯಾ, ಟರ್ಕಿ, ಇರಾನ್, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯಾ, ಇಥಿಯೋಪಿಯಾ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಲಿಬಿಯಾ, ಇಂಡೋನೇಷಿಯಾ, ವಿಯೆಟ್ನಾಂ, ಅರ್ಮೇನಿಯಾ, ಬೆಲಾರಸ್ ಮತ್ತು ವೆನೆಜುವೆಲಾ ದೇಶಗಳಿಗೆ ಪ್ರಯಾಣಿಸದಂತೆ ಸೌದಿ ಅರೇಬಿಯಾ ನಾಗರಿಕರಿಗೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ಶಾಂತನಾದ ವರುಣ, ತಗ್ಗಿದ ಪ್ರವಾಹ – ಚಿಕ್ಕಬಳ್ಳಾಪುರದ ಡ್ಯಾಮ್ನಲ್ಲಿ ಯುವಕನ ಕೋತಿಯಾಟ
- Advertisement 3
- Advertisement 4
ಕೆಲವು ದಿನಗಳಿಂದ ಹಲವಾರು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಈ ನಡುವೆ ಕೆಲವು ದೇಶಗಳಲ್ಲಿ ಮಂಕಿ ಪಾಕ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ಇತರ ದೇಶಗಳಿಗೆ ಪ್ರಯಾಣಿಸದಂತೆ ಆರೋಗ್ಯ ಸಚಿವಾಲಯ ಶನಿವಾರ ಸೂಚಿಸಿದೆ.
ಮೇಲೆ ನೀಡಿರುವ ಈ ದೇಶಗಳಿಗೆ ಪ್ರಯಾಣಿಸಲು ಇಚ್ಚಿಸುವವರಿಗೆ ಈ ನಿಷೇಧವು ಅನ್ವಯಿಸುತ್ತದೆ. ಆದರೆ ಭಾರತೀಯರನ್ನು ಸೌದಿ ಅರೇಬಿಯಾಗೆ ಪ್ರವೇಶಿಸುವುದನ್ನು ನಿರ್ಬಂಧಿಸಿಲಾಗಿದೆಯೇ ಎಂಬುವುದರ ಕುರಿತಂತೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಇದನ್ನೂ ಓದಿ: ವಾರಣಾಸಿ ಜಿಲ್ಲಾ ಕೋರ್ಟ್ನಲ್ಲಿ ಕಾಶಿ ಮಸೀದಿ ವಿಚಾರಣೆ – ಜ್ಞಾನವಾಪಿ ಮಸೀದಿಯಲ್ಲಿ ಮತ್ತೊಂದು ಶಿವಲಿಂಗ?