ಡ್ರೋನ್ ಕಣ್ಣಲ್ಲಿ ಸೆರೆಯಾದ ಬೈಂದೂರಿನ ಸೌಪರ್ಣಿಕಾ ನದಿ

Public TV
1 Min Read
Baindoor 6

ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿದ್ದು, ಡ್ರೋನ್ ಕಣ್ಣಲ್ಲಿ ಸುಂದರ ದೃಶ್ಯಗಳು ಸೆರೆಯಾಗಿವೆ.ಇದನ್ನೂ ಓದಿ: ವಾರದಲ್ಲಿ 2 ದಿನ ರಜೆ – ಕಾರ್ಮಿಕರ ಕೆಲಸದ ಅವಧಿ 10 ಗಂಟೆಗೆ ಹೆಚ್ಚಳ?

ಉಡುಪಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಳೆಯ ಆರ್ಭಟಕ್ಕೆ ಎಲ್ಲಾ ನದಿಗಳು ತುಂಬಿ ಹರಿಯುತ್ತಿವೆ. ಬೈಂದೂರಿನ ಸೌಪರ್ಣಿಕಾ ನದಿ, ನದಿಯ ತೊರೆ, ಕವಲುಗಳು, ತೀರದ ಪ್ರದೇಶಗಳು ಜಲಾವೃತಗೊಂಡಿದೆ.

ಪಶ್ಚಿಮಘಟ್ಟದ ತಪ್ಪಲು ಕೊಲ್ಲೂರು ಘಾಟಿ ಪ್ರದೇಶದಲ್ಲೂ ನಿರಂತರ ಮಳೆಯಿಂದಾಗಿ ಸೌಪರ್ಣಿಕಾ ನದಿ ಪಾತ್ರದ ನಾವುಂದ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ, ಮರವಂತೆ ಭಾಗದಲ್ಲಿ ನೆರೆನೀರು ಮನೆಗಳಿಗೆ ನುಗ್ಗಿ, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಸದ್ಯ ಮಳೆ ಕಡಿಮೆಯಾದ ನಂತರ ಸಹಜ ಸ್ಥಿತಿಗೆ ಬಂದಿವೆ.ಇದನ್ನೂ ಓದಿ:ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಇಸ್ರೇಲ್ ತಯಾರಿ

TAGGED:
Share This Article