ಹಾವೇರಿ: ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ, ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಶಿಕ್ಷಕನಿಗೆ ಧರ್ಮದೇಟು ನೀಡಿ ಚಪ್ಪಲಿ ಹಾರ ಹಾಕಿ ಸ್ಥಳೀಯರು ಮೆರವಣಿಗೆ ಮಾಡಿದ್ದರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ಮಾಡಿದ ಆರೋಪದಡಿ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಿ ಹಾವೇರಿ ಎಸ್ಪಿ ಯಶೋದಾ ವಂಟಗೋಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: TRF ಮುನ್ನಡೆಸುತ್ತಿದ್ದ ಪಾಕ್ ಉಗ್ರನೇ ಪಹಲ್ಗಾಮ್ ನರಮೇಧದ ಮಾಸ್ಟರ್ ಮೈಂಡ್: ಎನ್‌ಐಎ
ಸವಣೂರಿನ ಸಿಪಿಐ ದೇವಾನಂದ ಹಾಗೂ ಹೆಡ್ ಕಾನ್‌ಸ್ಟೆಬಲ್ ಮಲ್ಲಿಕಾರ್ಜುನ ಅವರನ್ನು ಅಮಾನತು ಮಾಡಲಾಗಿದೆ. ಡಿ.10 ರಂದು ಸವಣೂರು ಪಟ್ಟಣದಲ್ಲಿ ಶಿಕ್ಷಕ ಜಗದೀಶ್ ಎಂಬಾತನ ಮೇಲೆ ರ್ವಜನಿಕವಾಗಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮತ್ತು ಧರ್ಮದೇಟು ನೀಡಿ ಹಲ್ಲೆ ನಡೆಸಲಾಗಿತ್ತು.
ಸ್ಥಳೀಯರು ಬೀದಿ ಬೀದಿಯಲ್ಲಿ ಹಲ್ಲೆ ಮಾಡಿ ಮೆರವಣಿಗೆ ಮಾಡಿದ್ದರು. ಈ ಸಂಬಂಧ ಸವಣೂರಿನ ಪೋಲಿಸರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಕೊನೆಗೆ ಎಸ್ಪಿ ಕರ್ತವ್ಯ ಲೋಪದಡಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಿದ್ದಾರೆ. ಇದನ್ನೂ ಓದಿ: 3 ಬೈಕ್‌ಗಳ ನಡ್ವೆ ಸರಣಿ ಅಪಘಾತ – ಮೂವರು ಯುವಕರ ಕೈ-ಕಾಲು ಮುರಿತ

