-
ಜಾಗೃತಿಗಾಗಿ ಸಾವರ್ಕರ್ ಕೃತಿ ಹಂಚಿಕೆ – ಯುವಕರಿಗೆ ಕಾರ್ಯಾಗಾರ
ವಿಜಯಪುರ: ಗಣೇಶ ಹಬ್ಬದಂದು ಗಣೇಶ ಮೂರ್ತಿಯೊಂದಿಗೆ ಸಾವರ್ಕರ್ ಫೋಟೋವನ್ನೂ ಇಡಲು ವಿಚಾರ ಮಾಡಲಾಗಿದೆ ಎಂದು ಯುವ ಬ್ರಿಗೆಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
ಪಟ್ಟಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರ ಸಾವರ್ಕರ್ ಅವರಂಥ ರಾಷ್ಟ್ರ ನಾಯಕರನ್ನು ಯಾರೇ ಅವಮಾನ ಮಾಡಿದ್ರೂ ಸಹಿಸಿಕೊಳ್ಳುವ ಮಾತೇ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಕ್ಷಮಾಪಣೆ ಪತ್ರ ನೀಡಿದ್ರೆ ಗುತ್ತಿಗೆದಾರರ ವಿರುದ್ಧದ ಮಾನನಷ್ಟ ಮೊಕದ್ದಮೆ ವಾಪಸ್ – ಮುನಿರತ್ನ
Advertisement
Advertisement
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾವರ್ಕರ್ ಫೋಟೊವನ್ನು ಮುಸ್ಲಿಂ ಏರಿಯಾದಲ್ಲಿ ಹಾಕಬಾರದು, ಅವರ ಫೋಟೊವನ್ನು ಹಾಕಲೇಬಾರದು ಎಂಬ ಚಿಂತನೆಯನ್ನು ಹೊತ್ತಿದ್ದಾರೆ. ಅದಕ್ಕೆ ಪ್ರತಿಯಾಗಿ ಈ ಬಾರಿ ಗಣೇಶ ಪೆಂಡಾಲ್‌ಗಳಲ್ಲಿ ಸಾವರ್ಕರ್ ಫೋಟೊ ಹಾಕಬೇಕು ಎಂದು ಗಜಾನನ, ಹಿಂದೂಪರ ಸಂಘಟನೆಗಳು ಹಾಗೂ ರಾಷ್ಟ್ರಭಕ್ತರು ಆಲೋಚನೆ ಮಾಡಿದ್ದೇವೆ. ಅದಕ್ಕೆ ಪೂರಕವಾಗಿ ಇಂದು ವಿಜಯಪುರದಲ್ಲಿ ಬೈಠಕ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬ್ಯಾಡ್ ಕಾಮೆಂಟ್ ಮಾಡಿದವನಿಗೆ ಮುಟ್ಟಿ ನೋಡಿಕೊಳ್ಳುವಂತೆ ಖಡಕ್ ಉತ್ತರ ಕೊಟ್ಟ ಅನಸೂಯ
Advertisement
Advertisement
ಗಣೇಶನನ್ನು ಕೂರಿಸುವಾಗ ಸಾವರ್ಕರ್ ಫೋಟೊ ಅನ್ನು ಇಡುವ ವಿಚಾರ ಮಾಡಲಾಗಿದೆ. ಇದಕ್ಕೆ ಪೂರಕವಾಗಿ ಪುಸ್ತಕವನ್ನು ತರಲಾಗಿದೆ. ಅದನ್ನು ಕಡಿಮೆ ಬೆಲೆಗೆ ಪ್ರತಿಯೊಬ್ಬರಿಗೂ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಅಲ್ಲದೇ ಸಾವರ್ಕರ್ ಕುರಿತು ಯುವಕರಿಗೆ ಕಾರ್ಯಾಗಾರ ಮಾಡಲಾಗುತ್ತಿದೆ. ರಾಷ್ಟ್ರ ಪುರುಷರ ಬಗ್ಗೆ ಯಾರಾದ್ರೂ ಕೇವಲವಾಗಿ ಮಾತನಾಡಿದ್ರೆ ಅವರಿಗೆ ಪ್ರತಿಕ್ರಿಯೆ ಕೊಡಲು ಈ ಪ್ರಯತ್ನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
12 ವರ್ಷಗಳ ಕಾಲ ಕಾಲಾಪಾನಿ ಅಂತಹ ಜೈಲಿನಲ್ಲಿರುವಾಗ ಬೇರೆ ಅವಕಾಶಗಳೇ ಇರಲಿಲ್ಲ. ಆ ಸಂದರ್ಭದಲ್ಲಿ ಭಾರತದ ಕುರಿತು ಅವರು ತಮ್ಮದೇ ಶೈಲಿಯಲ್ಲಿ ತಮ್ಮದೇ ಕೃತಿಯಲ್ಲಿ ವರ್ಣಿಸಿದ್ದರು. ಅದನ್ನೇ ಪುಸ್ತಕದಲ್ಲಿ ತಿಳಿಸಲಾಗಿದೆ. ಅದನ್ನು ಅರ್ಥ ಮಾಡಿಕೊಳ್ಳುವ ವಿಶಾಲ ಮನಸ್ಸು ಎಲ್ಲರಿಗೂ ಇದೆ ಎಂದು ಟೀಕಾಕಾರರಿಗೆ ಕುಟುಕಿದ್ದಾರೆ.
Live Tv
[brid partner=56869869 player=32851 video=960834 autoplay=true]
[brid partner=56869869 player=32851 video=960834 autoplay=true]