ಶಿವಮೊಗ್ಗ: ಸಾವರ್ಕರ್ – ಟಿಪ್ಪು ಫ್ಲೆಕ್ಸ್ ವಿಚಾರವಾಗಿ ನಗರದ ಅಮೀರ್ ಅಹ್ಮದ್ ಸರ್ಕಲ್‍ನಲ್ಲಿ ನಡೆದಿದ್ದ ಗಲಾಟೆಯ ಎಕ್ಸ್‌ಕ್ಲೂಸಿವ್ ಸುದ್ದಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಸಾವರ್ಕರ್ ಫ್ಲೆಕ್ಸ್ ತೆರವಿನ ಬಳಿಕ ಕಿಡಿಗೇಡಿಗಳ ಗುಂಪು ಎಎ ಸರ್ಕಲ್‍ನಲ್ಲಿ ಜಮಾಯಿಸಿದ್ದರು. ಅಲ್ಲದೇ ಎಲ್ಲರೂ ಕರೆ ಮಾಡಿಕೊಂಡು ಒಟ್ಟಿಗೆ ಸೇರಿ ಮಾತನಾಡಿಕೊಳ್ಳುತ್ತಿರುವ ದೃಶ್ಯ ಸಿಕ್ಕಿದೆ. ಇದನ್ನೂ ಓದಿ: ಸಿದ್ದರಾಮೋತ್ಸವ ಉತ್ಸಾಹದಲ್ಲಿದ್ದ ಕಾಂಗ್ರೆಸ್‍ಗೆ ಶಾಕ್- ಲಿಂಗಾಯತ ಅಸ್ತ್ರಕ್ಕೂ ಚೆಕ್‍ಮೇಟ್
ಮುಸ್ಲಿಂ ಮುಖಂಡನೋರ್ವ ಯುವಕರಿಗೆ ಯಾರು ಕೂಡ ಸುಮ್ಮನೆ ಕೂರಬೇಡಿ, ಎಲ್ಲರೂ ಗುಂಪು ಸೇರಿಕೊಂಡು, ಮುಖಕ್ಕೆ ಮಾಸ್ಕ್ ಧರಿಸಿ, ಟೂಲ್ಸ್‌ಗಳನ್ನು ಜೇಬಿನಲ್ಲಿ ಇಟ್ಟುಕೊಳ್ಳಿ, ಕಲ್ಲು ತೂರಾಟ ನಡೆಸಿ ಎಂದು ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವುದು ವೀಡಿಯೋದಲ್ಲಿ ಲಭ್ಯವಾಗಿದೆ. ಇದನ್ನೂ ಓದಿ: ಸೀಟಿಗಾಗಿ ಮೆಟ್ರೋದಲ್ಲಿ ಮಹಿಳೆಯರಿಬ್ಬರ ಕಿತ್ತಾಟ – ವೀಡಿಯೋ ವೈರಲ್
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ದಿನದಂದು ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಎರಡು ಕೋಮಿನ ನಡುವೆ ಜಟಾಪಟಿ ನಡೆದಿತ್ತು. ಒಂದು ಗುಂಪು ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಎರಡು ಕೋಮಿನ ನಡುವೆ ಜಟಾಪಟಿ ನಡೆದಿತ್ತು. ಈ ವೇಳೆ ಸಾವರ್ಕರ್ ಫೋಟೊವನ್ನು ಬೀಳಿಸುವುರ ಜೊತೆಗೆ ಅಲ್ಲೇ ಪಕ್ಕದಲ್ಲಿದ್ದ ರಾಷ್ಟ್ರಧ್ವಜವನ್ನು ನೆಲಕ್ಕೆ ಬೀಳಿಸುವುದರ ಮೂಲಕ ರಾಷ್ಟ್ರಧ್ವಜಕ್ಕೂ ಅವಮಾನ ಮಾಡಿದ್ದರು.
ಇದೇ ವಿಚಾರವಾಗಿ ಪ್ರೇಮ್ ಸಿಂಗ್ (26) ಚಾಕು ಇರಿದ ಘಟನೆ ಶಿವಮೊಗ್ಗದ ಗಾಂಧಿ ಬಜಾರಿನಲ್ಲಿ ನಡೆದಿತ್ತು. ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಮನೆ ಮುಂದೆ ನಿಂತಿದ್ದ ಪ್ರೇಮ್ ಸಿಂಗ್ ಮೇಲೆ ದಾಳಿ ನಡೆಸಿ ಚಾಕು ಇರಿದಿದ್ದರು.