ಧಾರವಾಡ: ವಿ.ಡಿ ಸಾವರ್ಕರ್ ಅವರ ಭಾವಚಿತ್ರದ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿರುವಾಗಲೇ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿ.ಡಿ ಸಾವರ್ಕರ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅಪಮಾನ ಮಾಡಿದ್ದಾರೆ.
Advertisement
ಪ್ರತಿಭಟನೆ ನೆಪದಲ್ಲಿ ಸಾವರ್ಕರ್ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಮೊಟ್ಟೆ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಾವರ್ಕರ್ ಅವರ ಭಾವಚಿತ್ರವನ್ನು ಬೂಟುಗಾಲಿನಿಂದ ತುಳಿದು ಅಪಮಾನ ಮಾಡಿ, ಧಿಕ್ಕಾರ ಕೂಗಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ ಆರೋಪ – 1,500 ಪುಟಗಳ ದಾಖಲೆ ಸಲ್ಲಿಸಿದ ಸಾ.ರಾ.ಮಹೇಶ್
Advertisement
Advertisement
ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಕೊಡಗಿನ ಮಳೆಹಾನಿ ಪ್ರದೇಶಗಳ ಭೇಟಿಗೆ ತೆರಳಿದ್ದ ಸಂದರ್ಭದಲ್ಲಿ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು. ಇದಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಿ, ರಾತ್ರಿಯೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಘಟನೆ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಆಕ್ರೋಶ ಮುಂದುವರಿಸಿದ್ದು, ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
Advertisement
ಧಾರವಾಡ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಬಂದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಪ್ರತಿಕೃತಿಯನ್ನೂ ದಹಿಸಿದರು. ಈ ವೇಳೆ ವೀರ ಸಾವರ್ಕರ್ ಅವರ ಭಾವಚಿತ್ರವನ್ನೂ ಸುಟ್ಟು, ಅದರ ಮೇಲೆ ಮೊಟ್ಟೆ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗಾಂಧಿ ಭಾವಚಿತ್ರಕ್ಕೆ ಹಾನಿ – ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿ ಸೇರಿ 4 ಮಂದಿ ಅರೆಸ್ಟ್
ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಸಿಸಿ ಸದಸ್ಯ ದೀಪಕ ಚಿಂಚೋರೆ, ಸಾವರ್ಕರ್ ಭಾವ ಚಿತ್ರ ಸುಟ್ಟಿದ್ದು ನಾನು ನೋಡಿಲ್ಲ ಎಂದಿದ್ದಾರೆ. ಅಲ್ಲದೇ ನಮ್ಮ ಕಾರ್ಯಕರ್ತರು ಅದನ್ನು ಮಾಡಿಲ್ಲ, ಬಿಜೆಪಿ ಕಾರ್ಯಕರ್ತರೇ ಅದನ್ನ ಮಾಡಿರಬೇಕು, ಅಂತಹ ಸಂಸ್ಕೃತಿ ನಮ್ಮದಲ್ಲ ಎಂದು ಹೇಳಿದ್ದಾರೆ.