ಬ್ರಾಹ್ಮಣ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು: ದಿನೇಶ್ ಗುಂಡೂರಾವ್

Public TV
2 Min Read
Dinesh Gundurao

– ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ವಾದ ಅಲ್ಲ

ಬೆಂಗಳೂರು: ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ಅವರ ವಾದ ಅಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao)  ಹೇಳಿದ್ದಾರೆ.

ನಗರದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಅವರು ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ, ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇದನ್ನೂ ಓದಿ: ವಾರದಲ್ಲಿ ಸಿಎಂ ರಾಜೀನಾಮೆ ಕೊಡ್ತಾರೆ, ಸರ್ಕಾರ ಉರುಳುತ್ತೆ: ಛಲವಾದಿ

ಸಾವರ್ಕರ್ ಮೂಲಭೂತವಾದಿಯಾಗಿದ್ದರು ಎನ್ನುವುದರಲ್ಲಿ ಸಂಶಯವಿಲ್ಲ. ಮೂಲಭೂತವಾದ ನಮ್ಮ ಭಾರತ ದೇಶದ ಸಂಸ್ಕೃತಿಯಲ್ಲ. ಇದು ಯುರೋಪ್‌ನಿಂದ ಬಂದಿರುವಂತದ್ದು. ಸಾವರ್ಕರ್ ಯೂರೋಪ್‌ನಿಂದ ಸಾಕಷ್ಟು ಪ್ರಭಾವ ಹೊಂದಿದ್ದರು. ಜೊತೆಗೆ ಬ್ರಾಹ್ಮಣ ಸಮಾಜದ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು. ಮಾಂಸಹಾರ ಸೇವನೆಯನ್ನು ಅವರು ಬಹಿರಂಗವಾಗಿ ಸಮರ್ಥಿಸುತ್ತಿದ್ದರು. ಆದರೆ ಗಾಂಧೀಜಿಯವರು ಸಸ್ಯಾಹಾರಿ. ನಮ್ಮ ಸಂಸ್ಕೃತಿ, ಸಂಪ್ರದಾಯಗಳ ಮೇಲೆ ಗಾಂಧೀಜಿಯವರಿಗೆ ಅಪಾರವಾದ ನಂಬಿಕೆ ಇತ್ತು ಎಂದರು.

 

ದೇಶದಲ್ಲಿ ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ವಾದ ಅಲ್ಲ. ಯಾಕೆಂದರೆ ಸಾವರ್ಕರ್ ರಾಷ್ಟ್ರೀಯವಾದಿ ಆಗಿದ್ದರೂ, ಅವರ ಮೂಲಭೂತವಾದ ದೇಶಕ್ಕೆ ವಿರುದ್ಧವಾಗಿದೆ. ಮತ್ತು ಗಾಂಧೀಜಿಯವರ ಹತ್ಯೆ ಮಾಡಿದ ಗೋಡ್ಸೆ, ಸಾವರ್ಕರ್ ವಾದದಿಂದ ಪ್ರಭಾವಿತರಾಗಿದ್ದರು. ಸಾವರ್ಕರ್ ಅವರಲ್ಲಿದ್ದ ಚಿಂತನೆಗಳು, ರಾಷ್ಟ್ರೀಯವಾದಿ ಚಿಂತನೆಗಳ ರೀತಿ ಕಂಡರೂ ಪ್ರಜಾಪ್ರಭುತ್ವದ ಪರವಾದ ವ್ಯಕ್ತಿತ್ವ ಅವರದ್ದಲ್ಲ ಎಂದು ಹೇಳಿದರು.

Dinesh Gundurao 1

ಮೂಲಭೂತವಾದದ ವಿರುದ್ಧದ ಹೋರಾಟದಲ್ಲಿ ಈ ಅಂಶವನ್ನು ಅರಿತು ನಾವು ಮುಂದೆ ಸಾಗಬೇಕಿದೆ. “ಗಾಂಧೀಜಿಯ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ” ಪುಸ್ತಕ ಗಾಂಧೀಜಿಯವರ ಬಗ್ಗೆ ಸಾಕಷ್ಟು ವಿಚಾರಗಳ ಬಗ್ಗೆ ಬೆಳಕು ಚಲ್ಲಿದೆ. ಯಾರ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸದೇ, ವಿವರಗಳನ್ನ ಮಾತ್ರ ನೀಡಿರುವುದು ಪುಸ್ತಕದ ವಿಶೇಷ ಎಂದು ತಿಳಿಸಿದರು.ಇದನ್ನೂ ಓದಿ: ಕೆಂದ್ರದಿಂದ ತರೋದನ್ನು ರಾಜ್ಯಕ್ಕೆ ತನ್ನಿ, ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ – ಹೆಚ್‌ಡಿಕೆ ವಿರುದ್ಧವೇ ಜಿಟಿಡಿ ಕಿಡಿ

Share This Article